ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ವ್ಯಾಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣದ ಕುರಿತು ಪ್ರಜ್ವಲ್ ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ, ಸತ್ಯ ಆದಷ್ಟು ಬೇಗ ಹೊರಬರಲಿದೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CIDಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಈ ಸಂಘಿ ಸರ್ಕಾರವನ್ನು ಓಡಿಸಲು ಜಿಹಾದ್ಗೆ ಮತ ನೀಡಿ: ಕಾಂಗ್ರೆಸ್ ನಾಯಕಿ
ಪ್ರಜ್ವಲ್ ವಕೀಲರು ನೀಡಿರುವ ಪತ್ರದಲ್ಲೇನಿದೆ?
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆರ್.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್ನಲ್ಲಿ ತಾವು ದಿನಾಂಕ: 01-05-2024 ರಂದು ತಮ್ಮ ಮುಂದೆ. ಹಾಜರಾಗಲು ತಿಳಿಸಿರುತ್ತೀರಿ.
ಆದರೆ ನನ್ನ ಕಕ್ಷಿದಾರರಾದಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ಪ್ರಜ್ವಲ್ ವಕೀಲರು CIDಗೆ ನೀಡಲಾಗಿರುವ ಪತ್ರದಲ್ಲಿ ತಿಳಿಸಿದ್ದಾರೆ.