More

    ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು

    ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಹಾಸನ ಸಂಸದರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪ್ರಕರಣದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ.

    ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವೀಡಿಯೊಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ, ಗೌರವಗಳಿಗೆ ಧಕ್ಕೆ ಉಂಟು ಮಾಡಿವೆ.

    ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖಾದಳ ಈಗಾಗಲೇ ತನ್ನ ಕಾರ್ಯ ಪ್ರಾರಂಭಿಸಿದೆ. ಕಾರಣ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts