More

  ನ್ಯಾಯಾಂಗ ಬಂಧನಕ್ಕೆ ಪ್ರಜ್ವಲ್

  ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಪೊಲೀಸರು, ಪ್ರಜ್ವಲ್‌ನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.

  ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ಸಲುವಾಗಿ ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳು, ಮಂಗಳವಾರ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋಟ್, ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನು ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.

  ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದು, ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನ್ನು ಕಸ್ಟಡಿ ಪಡೆಯುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

  See also  ಪ್ರಿಯಕರನೊಂದಿಗೆ ತಾಯಿ ಹತ್ಯೆ ಮಾಡಿದ್ದವರು ಪೋರ್ಟ್​ ಬ್ಲೇರ್​ನಲ್ಲಿ ಸೆರೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts