ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಿ ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಪ್ರಕಾಶ್​ ರಾಜ್​

ಬೆಂಗಳೂರು: ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ದಿಕ್ಕನ್ನು ತಪ್ಪಿಸುತ್ತಿದೆ ಎಂದು ನಟ ಪ್ರಕಾಶ್​ ರಾಜ್​ ತಿಳಿಸಿದರು.

ನಗರದ ಚಿತ್ರಕಲಾ ಪರಿಷತ್​ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು ಕೇಂದ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ ಅವರು ಪಕ್ಷಗಳ ನಡುವೆ ವೋಟು ಹಂಚಿಕೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಕಣಕ್ಕೆ ಇಳಿದಿರುವುದಾಗಿ ಹೇಳಿದರು.

ನಾನು ಯಾರ ಬೆಂಬಲವನ್ನೂ ಕೇಳಿಲ್ಲ. ಕೇಜ್ರಿವಾಲ್ ದೆಹಲಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರಾಗಿಯೇ ನನ್ನ ಬೆಂಬಲಕ್ಕೆ ಬರುತ್ತಾರೆ. ಪ್ರಣಾಳಿಕೆಯ ಬಗ್ಗೆ ಮುಂದಿನ ದಿನಗಳಲ್ಲಿ ಮಾತಾಡುತ್ತೇನೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)

One Reply to “ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಿ ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಪ್ರಕಾಶ್​ ರಾಜ್​”

Comments are closed.