More

  ಪ್ರಲ್ಹಾದ ಜೋಶಿ ಟೆಂಪಲ್ ರನ್

  ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಗರದಲ್ಲಿ ಗುರುವಾರ ಟೆಂಪಲ್ ರನ್ ಆರಂಭಿಸಿದರು.
  ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಚಿವರು, ಉಭಯ ಶ್ರೀಗಳ ದರ್ಶನಾಶೀರ್ವಾದ ಪಡೆದರು. ಇದೇ ವೇಳೆ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠ ಟ್ರಸ್ಟ್ ಕಮಿಟಿಯಿಂದ ಗೌರವಿಸಲಾಯಿತು.
  ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಪ್ರಮುಖರಾದ ತಿಪ್ಪಣ್ಣ ಮಜ್ಜಗಿ, ಸಂತೋಷ ಚವ್ಹಾಣ, ರಂಗಾ ಬದ್ದಿ, ಬಸವರಾಜ ಕುಂದಗೋಳಮಠ ಇತರರು ಇದ್ದರು.
  ಪ್ರವಾಸ ಮುಂದೂಡಿಕೆ: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ ಜೋಶಿ, ಬೆಳಗಾವಿ ಲೋಕಸಭಾ ಚುನಾವಣೆ ಕಣಕ್ಕೆ ಜಗದೀಶ ಶೆಟ್ಟರ್ ಹೆಸರು ಇದೆ. ಬೇರೆಯವರ ಹೆಸರೂ ಇವೆ. ನಮ್ಮ ರಾಷ್ಟ್ರೀಯ ನಾಯಕರು ಹೆಸರು ಅಂತಿಮಗೊಳಿಸಲಿದ್ದಾರೆ ಎಂದರು.
  ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸವನ್ನು ಮುಂದೂಡಲಾಗಿದೆ. ಎಲ್ಲ ಅಭ್ಯರ್ಥಿಗಳ ಹೆಸರು ಪ್ರಕಟವಾದ ಬಳಿಕ ಪ್ರವಾಸದ ವೇಳೆ ನಿಗದಿಯಾಗಲಿದೆ. ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಹೆಸರ ಪ್ರಕಟಣೆ ಕುರಿತು ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
  ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಕಾರದಿಂದ ಟಿಕೆಟ್ ಸಿಕ್ಕಿದೆ. ಐದನೇ ಬಾರಿ ನಾನು ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ನಾನು ಸಾಕಷ್ಟು ಕೆಲಸ ಮಾಡಿದ್ದನ್ನು ಜನರು ನೋಡಿದ್ದಾರೆ ಎಂದರು.
  ಸರಿ ಪಡಿಸುತ್ತಾರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ತಮ್ಮ ಪುತ್ರನಿಗೆ ಹಾವೇರಿ ಟಿಕೆಟ್ ಸಿಗದೇ ಇರುವುದಕ್ಕೆ ಬೇಜಾರು ಆಗಿದೆ. ನನಗೆ ವಿಶ್ವಾಸವಿದೆ. ರಾಷ್ಟ್ರೀಯ ನಾಯಕರು ಇದನ್ನು ಸರಿ ಮಾಡುತ್ತಾರೆ. ಬಂಡಾಯ ಎದ್ದೇಳುವುದಿಲ್ಲ. ನೀವೇ ಹೇಳಿ ಬಂಡಾಯ ಎಬಿಸಬೇಡಿ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts