More

    ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಂಡಿದ್ದೇನೆ; ಪ್ರಮೋದ್ ಮುತಾಲಿಕ್

    ಮೈಸೂರು: ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕಾರ್ಕಳ ಕ್ಷೇತ್ರದಲ್ಲಿ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ. ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಇದನ್ನೂ ಓದಿ: ಬಸ್ಸಿನಲ್ಲಿ ಹಿಂದು ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಹಲ್ಲೆ

    ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡುತ್ತಾ, ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ. ಅಲ್ಲಿನ ಸ್ಥಳೀಯ ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಕುರಾನ್ ಪಠಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳ‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

    ಇದನ್ನೂ ಓದಿ: ಖಾಜಿ ಸಾಹೇಬ್ ಕುರಾನ್ ಪಠಣ ಮಾಡಿಲ್ಲ; ಚನ್ನಕೇಶವ ದೇವಾಲಯ ವ್ಯವಸ್ಥಾಪನಾ ಸಮಿತಿ ಸ್ಪಷ್ಟನೆ

    ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ. ಅಕ್ರಮ ಗೋ ಸಾಗಾಟ ತಡೆಗಟ್ಟಲು ಮುಂದಾದ ಪುನಿತ್ ಕೆರೆಹಳ್ಳಿ ವಿರುದ್ಧ ಎಫ್​ಐಆರ್ ದಾಖಲಿಸಿ, ಬಂಧಿಸಿರುವುದು ಸರಿಯಾದ ಕ್ರಮವಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರ ಪರ ನಿಂತಿರುವುದು ಸರಿಯಲ್ಲ. ಅಕ್ರಮ ಗೋ ಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts