ಬಾಗಲಕೋಟೆ: ‘ಛತ್ರಪತಿ ಶಿವಾಜಿ ಮಹಾರಾಜ್ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ..’
– ಹೀಗೊಂದು ಹೇಳಿಕೆ ನೀಡಿರುವುದು ಮತ್ಯಾರೂ ಅಲ್ಲ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್.
ಇಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎನ್ನಲಾಗಿರುವ ಪ್ರಮೋದ್ ಮುತಾಲಿಕ್ ಈ ಹೇಳಿಕೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದ್ದಾರೆ.
ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಮುತಾಲಿಕ್ ಹೇಳಿದ್ದಾರೆ.
ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು.ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ. ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ ಎಂದು ಮುತಾಲಿಕ್ ಹೇಳಿದ್ದಾರೆ.
ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!