17 C
Bangalore
Monday, December 9, 2019

ಪ್ರಮೋದ್ ಮೈತ್ರಿ ಅಭ್ಯರ್ಥಿ: 25ಕ್ಕೆ ನಾಮಪತ್ರ ಸಲ್ಲಿಕೆ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಜಾತ್ಯತೀತ ಜನತಾದಳ ಪಕ್ಷದಿಂದ ಬಿ-ಫಾರ್ಮ್ ಪಡೆದಿದ್ದು, ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಂದ ಪಕ್ಷದ ಬಿ-ಫಾರ್ಮ್ ಪಡೆದಿದ್ದು, ಅಧಿಕೃತವಾಗಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಲಿ, ಗೆಲ್ಲುವುದು ಮಾತ್ರ ನಾನೇ ಎಂದು ಪ್ರಮೋದ್ ಟ್ವೀಟ್ ಮಾಡಿದ್ದಾರೆ. ಸೀಟು ಹಂಚಿಕೆಯಲ್ಲಿ ಕ್ಷೇತ್ರವನ್ನು ಜೆಡಿಎಸ್‌ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಆದರೆ ಜೆಡಿಎಸ್‌ನಲ್ಲಿ ಮತ ಸೆಳೆಯುವ ಸೂಕ್ತ ಅಭ್ಯರ್ಥಿ ಇಲ್ಲದಿರುವುದರಿಂದ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಇನ್ನೊಂದು ಸುತ್ತಿನ ಒಳಮೈತ್ರಿಯಂತೆ, ಪ್ರಮೋದ್ ಅವರು ಕಾಂಗ್ರೆಸ್ ಸದಸ್ಯರಾಗಿರುವಂತೆಯೇ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ತೊರೆಯದೆ, ಜೆಡಿಎಸ್‌ಗೆ ಸೇರ್ಪಡೆಯಾಗದೆ ಇದು ಹೇಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬ ಕುತೂಹಲವಿದೆ.

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಮೋದ್ ಅವರಿಗೆ ಜೆಡಿಎಸ್ ಪಕ್ಷದಿಂದ ಬಿ-ಫಾರ್ಮ್ ನೀಡಲಾಗಿದೆ ಎಂದು ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಕೂಡ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ನನಗೆ ಬಿ ಫಾರ್ಮ್ ನೀಡಲಾಗಿದೆ. ಜೆಡಿಎಸ್ ಪಕ್ಷದ ಚಿಹ್ನೆಯಡಿಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನ.25ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ನನ್ನ ಗೆಲುವು ಖಚಿತ.
ಪ್ರಮೋದ್ ಮಧ್ವರಾಜ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...