ವೋಟರ್ ಐಡಿ ಮರೆತು ಬಂದ ಪ್ರಮೋದಾ ದೇವಿ ಒಡೆಯರ್! ಮುಂದೇನಾಯ್ತು?

pramoda devi
Published on

ಮೈಸೂರು: ಮೈಸೂರು ಒಡೆಯರ್ ರಾಜಮನೆತನದ ರಾಮಜಮಾತೆ ಪ್ರಮೋದಾದೇವಿ ವೋಟರ್​ ಐಡಿ ಮರೆತು ಮತಗಟ್ಟೆಗೆ ತೆರಳಿದ ಅಪರೂಪದ ಘಟನೆ ಮೈಸೂರಿನಲ್ಲಿ ನಡೆದಿದೆ.

ವೋಟರ್ ಐಡಿ ಮರೆತ ಪ್ರಮೋದಾ ದೇವಿ ಒಡೆಯರ್ ಮತಗಟ್ಟೆಯ ಬಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅವರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ.

ಆಗ ಅವರು ತಮ್ಮ ಮೊಬೈಲ್‌ನಲ್ಲಿದ್ದ ಸಾಫ್ಟ್ ಕಾಪಿಯನ್ನು ತೋರಿಸಿದ್ದಾರೆ. ಆದರೆ ಇದಕ್ಕೆ ಮತಗಟ್ಟೆ ಅಧಿಕಾರಿಗಳು ಒಪ್ಪಿಗೆ ನೀಡಿಲ್ಲ. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಎಂದು ಈ ಮೂಲಕ ಮತಗಟ್ಟೆ ಅಧಿಕಾರಿಗಳು ಸಾರಿದ್ದಾರೆ. ಹೀಗಾಗಿ ವೋಟರ್ ಐಡಿ ತರಲು ಮತಗಟ್ಟೆಯಿಂದ ಪ್ರಮೋದಾದೇವಿ ಒಡೆಯರ್ ವಾಪಸ್ ತೆರಳಿದರು. ಹೀಗಾಗಿ ಮತಗಟ್ಟೆಯ ಮುಂಭಾಗದಲ್ಲೇ ಕಾರಿನಲ್ಲಿ ಕುಳಿತ ಪ್ರಮೋದಾ ದೇವಿ ವಾಪಸ್ ತೆರಳಿದರು. ಈ ಘಟನೆ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ನಡೆದಿದೆ.

ಮತದಾನದ ನಂತರ ಪ್ರಮೋದಾದೇವಿ ಒಡೆಯರ್ ಹೇಳಿಕೆ ನೀಡಿದ್ದು "ಮೊದಲೆಲ್ಲ ಪಾರ್ಟಿಯಿಂದ ಚೀಟಿ ಕೊಡುತ್ತಿದ್ದರು. ಈ ಬಾರಿ ಆಫಿಸ್​ನಿಂದ ಚೀಟಿ ಕೊಟ್ಟಿದ್ದಾರೆ. ಅದರಲ್ಲಿ‌ ಎಲ್ಲಾ ಮಾಹಿತಿ ಇದೆ. ಅದರ ಭರವಸೆ ಮೇಲೆ ಬೇರೆ ಚೀಟಿ ಕೊಡಲ್ಲ ಅಂತ ಬಂದಿದ್ದೆ. ಆದರೆ ಅದು ಸಾಲಲ್ಲ, ಬೇರೆ ದಾಖಲೆ ಬೇಕು ಅಂತ ಹೇಳಿದ್ರು. ಆಫಿಸ್‌ನಿಂದ ಬಂದ ಚೀಟಿಯಿಂದಾಗಿ ಬೇರೆ ದಾಖಲೆ ತಂದಿರಲಿಲ್ಲ. ಹಾಗಾಗಿ ಮತದಾನ‌ ತಡ ಆಯ್ತು. ಸಾಫ್ಟ್​ ಕಾಪಿಯಲ್ಲಿ ಹಾಕಿದ್ದಾರೆ. ಡಿಜಿಟಲ್ ಕಾಪಿ ಅಲೋ ಮಾಡಲ್ಲ ಅಂತ ಗೊತ್ತಿರಲಿಲ್ಲ.

ಯುವಕರು ಮತದಾನದ ಮೂಲಕ ತಮ್ಮ ಭಾವನೆ ವ್ಯಕ್ತ ಪಡಿಸಬೇಕು. ಅಲ್ಲದೆ ನಮ್ಮ ಧ್ವನಿ ಕೇಳಲ್ಲ ಅಂದ್ರೆ ಏನೂ ಮಾಡೊಕೆ ಆಗಲ್ಲ. ಅವಕಾಶ ಸಿಕ್ಕಾಗ ನಿಮ್ಮ ಭಾವನೆ ವ್ಯಕ್ತಪಡಿಸಿ. ನಿಮ್ಮ ನಿರಾಸಕ್ತಿಯೂ ಇದ್ರೂ ಅದನ್ನ ಇಲ್ಲಿ ಬಂದು ವ್ಯಕ್ತಡಿಸಿ. ನಾನೂ ಕೂಡ ಅದೇ ಉದ್ದೇಶದಿಂದ ಮತದಾನ ಮಾಡಿದ್ದೇನೆ." ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net