More

    ಪ್ರಣಬ್​ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ: ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಮುಂದುವರಿಕೆ

    ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರ ಆರೋಗ್ಯ ಮತ್ತಷ್ಟು ಬಿಗಡಾಯಿದ್ದು, ವೆಂಟಿಲೇಟರ್​ ಬೆಂಬಲದಲ್ಲೇ ದೆಹಲಿಯ ಆರ್ಮಿ ರೀಸರ್ಚ್​ ಆ್ಯಂಡ್​ ರೆಫೆರ್ರಲ್​ (ಆರ್​ಆ್ಯಂಡ್​ಆರ್​) ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

    ತೀವ್ರ ಅನಾರೋಗ್ಯದಿಂದಾಗಿ ಪ್ರಣಬ್​ ಮುಖರ್ಜಿ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇದಲ್ಲದೆ ಪ್ರಣಬ್​ ಅವರಿಗೆ ಕರೊನಾ ಪಾಸಿಟಿವ್​ ಸಹ ಇರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

    ಆರ್ಮಿ ಆರ್​ ಆ್ಯಂಡ್​ ಆರ್​ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಾಬ್​​ ಆರೋಗ್ಯ ಸ್ಥಿತಿ ಬಗ್ಗೆ ಮಾತನಾಡಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ. ಬದಲಾಗಿ ಮತ್ತಷ್ಟು ಕ್ಷೀಣಿಸುತ್ತಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

    ಬಹುಶಿಸ್ತೀಯ ವೈದ್ಯರ ತಂಡ ಪ್ರಣಬ್​ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಇನ್ನು ಪ್ರಣಬ್​ ಅವರು ತಮ್ಮ ಶೌಚಗೃಹದಲ್ಲಿ ಆಕಸ್ಮಿಕವಾಗಿ ಬಿದ್ದಿದ್ದರಿಂದ ಮಿದುಳಿನಲ್ಲಿ ಹೆಪ್ಪುಗಟ್ಟಿದೆ ಎಂದು ಹೇಳಲಾಗುತ್ತಿದೆ.

    ನಿನ್ನೆ ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ಕೊವಿಡ್​-19 ಟೆಸ್ಟ್​ಗೆ ಒಳಗಾದಾಗ ಅದರ ವರದಿ ಪಾಸಿಟಿವ್​ ಬಂದಿದೆ ಎಂದು ಹೇಳಿದ್ದರು.

    ಪ್ರಣಬ್​ ಮುಖರ್ಜಿ ಬೇಗ ಚೇತರಿಸಿಕೊಳ್ಳಲಿ ಎಂದು ಕಾಂಗ್ರೆಸ್​ ಮುಖಂಡರಾದ ರಾಹುಲ್​ ಗಾಂಧಿ, ಕೇಂದ್ರ ಸಚಿವ ಪಿಯೂಷ್​ ಗೋಯಲ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಹಾರೈಸಿದ್ದು, ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. (ಏಜೆನ್ಸೀಸ್​)

    ಮಿದುಳು ಸರ್ಜರಿಗೆ ಒಳಗಾಗಿರುವ ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts