ಪ್ರಾಪ್ತಿ ರಾಜ್ಯಮಟ್ಟಕ್ಕೆ ಆಯ್ಕೆ

prapthi
ಪ್ರಾಪ್ತಿ
Published on

ಹೆಬ್ರಿ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಎಳ್ಳಾರೆಯ ಪ್ರಭಾಕರ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿ ಪುತ್ರಿ. ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net