ಶಟಲ್‌ನಲ್ಲಿ ಪ್ರಾರ್ಥನಾ ರಾಜ್ಯಮಟ್ಟಕ್ಕೆ ಆಯ್ಕೆ

prarthana
ಪ್ರಾರ್ಥನಾ ಪೈ
Published on

ಗಂಗೊಳ್ಳಿ : ಮೈಸೂರು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲಾ ಉಪನಿರ್ದೇಶಕರ (ಆಡಳಿತ) ಕಚೇರಿ ವತಿಯಿಂದ ಮೈಸೂರಿನ ಗೋಪಾಲಸ್ವಾಮಿ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಸೋಮವಾರ ನಡೆದ ಮೈಸೂರು ವಿಭಾಗ ಮಟ್ಟದ 17 ವಯೋಮಿತಿಯ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net