ಗಂಗೊಳ್ಳಿ: ರಾಮನಗರ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಕನಕಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಕನಕಪುರದ ಟೌನ್ ಟೆನಿಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಷಟ್ಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಾರ್ಥನಾ ಪೈ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದು, ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿ ಪುತ್ರಿ. ಪ್ರಸ್ತುತ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲಾ ಆಡಳಿತ ಮಂಡಳಿ ಸಹಿತ ಹಲವರು ಸಾಧಕಿಯನ್ನು ಅಭಿನಂದಿಸಿದ್ದಾರೆ.