More

    ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಪ್ರಸಾದ್‌ಗೆ ಸನ್ಮಾನ

    ಸುಂಟಿಕೊಪ್ಪ: ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶತಮಾನೋತ್ಸವ ಸಮಾರಂಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಇತಿಹಾಸದಲ್ಲೇ ಅತ್ಯುನ್ನತ ಪದವಿ ಪುರಸ್ಕಾರ, ಗೌರವಗಳಿಗೆ ಪಾತ್ರರಾದ ಮೂಲತಃ ಕೊಡಗಿನವರಾದ ಲೆ.ಜ.ಡಾ.ಬಿ.ಎನ್.ಬಿ.ಎಂ.ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಪ್ರಾಂಶುಪಾಲೆ ಡಾ.ದಾಕ್ಷಾಯಿಣಿ ಅವರು ಇತರ ಗಣ್ಯರ ಸಮುಖದಲ್ಲಿ ಡಾ.ಪ್ರಸಾದ್ ಅವರಿಗೆ ಮೈಸೂರು ಪೇಟ, ಶಾಲು, ಫಲ-ತಾಂಬೂಲ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

    ಡಾ.ಪ್ರಸಾದ್ ಅವರು 1977ರಲ್ಲಿ ವೈದ್ಯರಾದ ಬಳಿಕ ಭಾರತೀಯ ಭೂಸೇನೆ ಸೇರಿದರು. ಸೇನೆಯಲ್ಲಿ ವಿವಿಧ ಜವಾಬ್ದಾರಿಗಳೊಂದಿಗೆ ಹಂತ ಹಂತವಾಗಿ ಪದನ್ನೊತ್ತಿ ಹೊಂದಿದರು. ಭಾರತೀಯ ರಕ್ಷಣಾ ಪಡೆಗಳ ವೈದ್ಯಕೀಯ ವಿಭಾಗದ ಮಹಾ ನಿರ್ದೇಶಕರಾಗಿ, ಮುಖ್ಯ ಸಮಾಲೋಚಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

    ಇದರೊಂದಿಗೆ ರಾಷ್ಟ್ರಪತಿಗಳ ಗೌರವ ಸರ್ಜನ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ಪ್ರಶಸ್ತಿ ಮತ್ತು ಗೌರವ ಪದವಿಗಳಿಗೆ ಪಾತ್ರರಾಗಿದ್ದು, ನಿವೃತ್ತಿ ನಂತರ ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಚಿನ್ಮಯ ಮಿಷನ್ ಆಸ್ಪತ್ರೆಯಲ್ಲಿ ಹಿರಿಯ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ನಾರಾಯಣ್‌ಭಟ್ ಮತ್ತು ಲಕ್ಷ್ಮಮ್ಮ ದಂಪತಿ ಪುತ್ರ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts