18.1 C
Bangalore
Saturday, December 7, 2019

‘ಪವಿತ್ರ ಆರ್ಥಿಕತೆ’ಗಾಗಿ ಅಸಹಕಾರ ಚಳವಳಿ: ರಂಗಕರ್ಮಿ ಪ್ರಸನ್ನ ಹೆಗ್ಗೋಡು

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಮಂಗಳೂರು: ಸಣ್ಣ ಕೈಗಾರಿಕೆಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ‘ಪವಿತ್ರ ಆರ್ಥಿಕತೆ’ ಹೆಸರಿನಲ್ಲಿ ಡಿ.1ರಿಂದ ಕೇಂದ್ರ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸಲು ನಿರ್ಧರಿಸಿರುವುದಾಗಿ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಹೇಳಿದ್ದಾರೆ.

ನಗರದ ರೋಶನಿ ನಿಲಯ ಕಾಲೇಜಿನ ಆವರಣದಲ್ಲಿ ಶುಕ್ರವಾರ ಗಾಂಧಿ 150ನೇ ಚಿಂತನ ಯಾತ್ರೆ, ರೋಶನಿ ನಿಲಯ ಸೋಶಿಯಲ್ ವರ್ಕ್ ಸೂಕಲ್ ಮತ್ತು ಬೆಂಗಳೂರಿನ ಗ್ರಾಮ ಸೇವಾ ಸಂಘದ ಆಶ್ರಯದಲ್ಲಿ ಸಂವಾದ ಮತ್ತು ಸತ್ಯಾಗ್ರಹದ ಮುನ್ನೋಟ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.
ಶೇ.60ರಷ್ಟು ದೈಹಿಕ ದುಡಿಮೆ ಇರುವ, ಶೇ.60ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯಾಗುವ ಹಾಗೂ ಶೇ.40ಕ್ಕಿಂತ ಕಡಿಮೆ ಯಂತ್ರೋಪಕರಣಗಳ ಬಳಕೆಯಾಗುವ ಸಣ್ಣ ಕೈಗಾರಿಕೆಗಳ ಉಳಿವಿಗೆ ಒತ್ತಾಯಿಸಿ ಸತ್ಯಾಗ್ರಹ ನಡೆಸುತ್ತಿದ್ದು, ತೀವ್ರಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾದ ಹೋರಾಟ ಅಕ್ಟೋಬರ್ 2ರಿಂದ ಸತ್ಯಾಗ್ರಹದ ರೂಪ ಪಡೆದಿದೆ. ಹೋರಾಟದ ಭಾಗವಾಗಿ, ಪವಿತ್ರ ಆರ್ಥಿಕ ಕ್ಷೇತ್ರಕ್ಕೆ ಶೂನ್ಯ ತೆರಿಗೆ ವಿಧಿಸಬೇಕು, ಮರು ಹಣಕಾಸು ವ್ಯವಸ್ಥೆ ಮಾಡಬೇಕು, ಕ್ಷೇತ್ರದ ಸಮಗ್ರ ಸುಧಾರಣೆಗಾಗಿ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ಸದಾನಂದ ಗೌಡರ ಮೂಲಕ ಕೇಂದ್ರಕ್ಕೆ ಮನವಿ ಪತ್ರವೊಂದನ್ನು ಬರೆಯಲಾಗಿದ್ದು, ಪ್ರತಿಕ್ರಿಯೆಗಾಗಿ ನೀಡಲಾಗಿದ್ದ 15 ದಿನ ಕಾಲಾವಕಾಶ ಕೊನೆಗೊಂಡಿದೆ. ಡಿ.1ರಂದು ಬೆಂಗಳೂರಿನಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಯಾವುದೇ ಸ್ಪಂದನೆ ದೊರೆಯದಿದ್ದರೆ ಅಸಹಕಾರ ಚಳವಳಿ ಆರಂಭಿಸುವುದಾಗಿ ತಿಳಿಸಿದರು.

ಸಂವಾದದಲ್ಲಿ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ಭೌತಶಾಸ್ತ್ರ ಪ್ರಾಧ್ಯಾಪಕ ಸತ್ಯಜಿತ್, ರಾಜೇಂದ್ರ ಉಡುಪಿ, ವಿದ್ಯಾ ದಿನಕರ್, ಮುಸ್ತಫಾ, ಅಬ್ದುಲ್ ಖಲೀಫ್ ಮೊದಲಾದವರು ತಮ್ಮ ಅನಿಸಿಕೆ, ಸವಾಲುಗಳನ್ನು ಪ್ರಸನ್ನ ಹೆಗ್ಗೋಡು ಅವರೊಂದಿಗೆ ಹಂಚಿಕೊಂಡರು.

ರಾಜಕೀಯ ಚಳವಳಿ ಅಲ್ಲ
ಕೇಂದ್ರದ ವಿರುದ್ಧದ ಅಸಹಕಾರ ಚಳವಳಿ ಯಾವುದೇ ರೂಪ ರಾಜಕೀಯ ಚಳವಳಿ ಅಲ್ಲ ಎಂದು ಪ್ರಸನ್ನ ಹೆಗ್ಗೋಡು ಸ್ಪಷ್ಟಪಡಿಸಿದರು. ಆರ್ಥಿಕ ಹಿಂಜರಿತವು ಈ ರೀತಿಯ ಚಳವಳಿಗೆ ಯುವಕರನ್ನು ಪ್ರೇರೇಪಿಸುತ್ತದೆ. ಎದುರಾಗಿರುವ ಸಮಸ್ಯೆಯನ್ನು ಎದುರಿಸಲು ಯಾವುದೇ ತಾತ್ವಿಕತೆಯ ಅವಶ್ಯಕತೆ ಇಲ್ಲ. ಬದಲಾಗಿ ಮಿತೃತ್ವದ ಮೂಲಕ ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಈ ಪವಿತ್ರ ಆರ್ಥಿಕತೆಯ ಹೋರಾಟದ ಉದ್ದೇಶ ಎಂದರು.

ಕಳೆದ 30 ವರ್ಷಗಳಲ್ಲಿ ನೆಲ ಜಲ ಉಳಿಸುವ ನಿಟ್ಟಿನಲ್ಲಿ ಜನರಿಗೆ ಮನವರಿಕೆ ಮಾಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆರ್ಥಿಕ ಬಿಕ್ಕಟ್ಟಿನ ಸಮಸ್ಯೆ ಪರಿಹರಿಸಬೇಕಾದದ್ದು ಸರ್ಕಾರಗಳು. ಆದರೆ ಅಧಿಕಾರದಲ್ಲಿರುವ ಬಿಜೆಪಿ ತನ್ನ ಸುತ್ತ ಶತ್ರುಗಳನ್ನು ಹುಟ್ಟು ಹಾಕುತ್ತಿದೆ. ಎಲ್ಲ ಧರ್ಮಗಳ ಸಂತರು ಹೇಳಿರುವಂತೆ ದುಡಿಮೆಯೇ ಧರ್ಮ ಎಂಬ ನೆಲೆಯಲ್ಲಿ ನಾವು ಪವಿತ್ರ ಆರ್ಥಿಕತೆಯನ್ನು ಗೆಲ್ಲಿಸಬೇಕಾಗಿದೆ.
– ಪ್ರಸನ್ನ ಹೆಗ್ಗೋಡು, ರಂಗಕರ್ಮಿ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...