25.9 C
Bengaluru
Wednesday, January 22, 2020

ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ ಗೆಲುವಿನ ಜವಾಬ್ದಾರಿ ಚುನಾವಣಾ ಚಾಣಕ್ಯ ಪ್ರಶಾಂತ್​ ಕಿಶೋರ್​ ಹೆಗಲಿಗೆ!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವೇ ತಿಂಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಆಮ್​ ಆದ್ಮಿ ಪಕ್ಷಕ್ಕೆ ಸಾಥ್​ ನೀಡಲು ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಪ್ರಶಾಂತ್​ ಕಿಶೋರ್ ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಶನಿವಾರ ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.​

ಪ್ರಶಾಂತ್​ ಕಿಶೋರ್​ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ(I-PAC) ಸಲಹಾ ಸಂಸ್ಥೆಯು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್​ ಕೇಜ್ರಿವಾಲ್​ ಪಕ್ಷದ ಪರವಾಗಿ ಕೆಲಸ ಮಾಡಲಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಕೇಜ್ರಿವಾಲ್​, ಐಪ್ಯಾಕ್​ ಸಂಸ್ಥೆ ನಮ್ಮೊಟ್ಟಿಗೆ ಸೇರಲು ಬರುತ್ತಿದೆ. ಅವರಿಗೆ ಸ್ವಾಗತಿಸುತ್ತಾ ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ಪ್ರಶಾಂತ್​ ಕಿಶೋರ್​ ಅವರ ಐಪ್ಯಾಕ್​ ಸಂಸ್ಥೆ 2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್​ ಪಕ್ಷದ ಪರ ಕೆಲಸ ಮಾಡುತ್ತಿದೆ. ಬಂಗಾಳದಲ್ಲಿ ಬಿಜೆಪಿ ಹೊಸಚೈತನ್ಯದೊಂದಿಗೆ ಈಗೀಗ ತಲೆ ಎತ್ತುತ್ತಿದೆ. ಇದರ ನಡುವೆಯೇ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಹಾಕಾರಿಯಾಗಲೆಂದು ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಮತ್ತು ಶಾಸಕ ಅಭಿಷೇಕ್​ ಬ್ಯಾನರ್ಜಿ ಪ್ರಶಾಂತ್​ ಕಿಶೋರ್​ ಅವರನ್ನು ಜೂನ್​ 6ರಂದು ಪಕ್ಷದ ಕಚೇರಿಗೆ ಕರೆತಂದಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ವೈ.ಎಸ್​.​ ಜಗನ್ ಮೋಹನ್​​ ರೆಡ್ಡಿ ಅವರು ಎದುರಾಳಿ ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡುರನ್ನು ಸೋಲಿಸಿ ಆಂಧ್ರ ಸಿಎಂ ಗಾದಿಗೆ ಏರಿದ್ದರು. ಈ ವೇಳೆ ರೆಡ್ಡಿ ಅವರ ಯಶಸ್ಸಿನಲ್ಲಿ ಪ್ರಶಾಂತ್​ ಕಿಶೋರ್​ ಪಾತ್ರ ಇರುವುದಾಗಿ ಭಾರಿ ಸುದ್ದಿಯಾಗಿತ್ತು.

ಪ್ರಶಾಂತ್​ ಕಿಶೋರ್​ ಅವರು ಬಿಹಾರ ಸಿಎಂ ನಿತೀಶ್​ ಕುಮಾರ್​ ಅವರ ಜನತಾ ದಳ ಯುನೈಟೆಡ್​ ಪಕ್ಷದ ಉಪಾಧ್ಯಕ್ಷರಾಗಿದ್ದು, ತಮ್ಮ ಚುನಾವಣಾ ಚಾಣಕ್ಯದಿಂದಲೇ ಹಲವರ ಗೆಲುವಿಗೆ ಕಾರಣರಾಗುವ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...