

ಜೂ. ಎನ್ಟಿಆರ್ಗೆ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ... ಕಳೆದ ಕೆಲ ತಿಂಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹೀಗೊಂದು ಸುದ್ದಿ ಓಡಾಡುತ್ತಲೇ ಇತ್ತು. ಆದರೆ ಅಧಿಕೃತ ಘೋಷಣೆ ಮಾತ್ರ ಆಗಿರಲಿಲ್ಲ. ಅದಾದ ಬಳಿಕ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ನಲ್ಲಿ ನೀಲ್ ನಿರ್ದೇಶನದ ಸಿನಿಮಾವೊಂದು ಬರಲಿದೆ ಎಂಬ ಸುದ್ದಿಯಾಗಿತ್ತು.
ಇದೀಗ ಜೂ. ಎನ್ಟಿಆರ್ ಬರ್ತ್ಡೇ ನಿಮಿತ್ತ ಈ ವಿಚಾರ ಅಧಿಕೃತವಾಗಿ ಬಹಿರಂಗವಾಗಿದೆ. ಸದ್ಯ ರಾಜಮೌಳಿಯ ‘ಆರ್ಆರ್ಆರ್’ ಚಿತ್ರದಲ್ಲಿ ಎನ್ಟಿಆರ್ ನಟಿಸುತ್ತಿದ್ದು, ಅದು ಮುಗಿಯುತ್ತಿದ್ದಂತೆ ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಾದ ಬಳಿಕ ನೀಲ್ ಜತೆ ಎನ್ಟಿಆರ್ ಕೈ ಜೋಡಿಸಲಿದ್ದಾರೆ. ಆ ಚಿತ್ರಕ್ಕೆ ಮೈ ತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಲಿದೆ. ಮಾಸ್ ಆಕ್ಷನ್ ಶೈಲಿಯ ಸಿನಿಮಾ ಇದಾಗಿರಲಿದೆ.