More

    ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ, ನಿರ್ಭೀತಿಯಿಂದ ಮತದಾನ ಮಾಡಿ: ಪ್ರತಾಪ್​ ರೆಡ್ಡಿ

    ಬೆಂಗಳೂರು: ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನ್ಯಾಯ ಹಾಗೂ ಶಾಂತಿಯುತ ಮತದಾನಕ್ಕೆ ಬೆಂಗಳೂರು ನಗರ ಪೊಲೀಸ್ ಘಟಕ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಮತದಾನದ ಭದ್ರತೆಗಾಗಿ 15 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

    ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 1,907 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಇಂತಹ ಮತಗಟ್ಟೆಗಳ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ನಗರದ ಒಟ್ಟು 7,916 ಮತಗಟ್ಟೆಗಳಲ್ಲಿ 1,907 ಮತಗಟ್ಟೆಗಳು ಸೂಕ್ಷ ಮತಗಟ್ಟೆಗಳೆಂದು ಪರಿಗಣಿಸಿದ್ದರೆ, 6,009 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವಿಂಗಡಿಸಿ ಅಗತ್ಯಕ್ಕೆ ತಕ್ಕಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

    ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ, ನಿರ್ಭೀತಿಯಿಂದ ಮತದಾನ ಮಾಡಿ: ಪ್ರತಾಪ್​ ರೆಡ್ಡಿ

    ಒಟ್ಟು ಮತಗಟ್ಟೆ ಕೇಂದ್ರಗಳು 2,509 ಇರಲಿದ್ದು, ಇದರಲ್ಲಿ 369 ಸೆಕ್ಟರ್ ಮೊಬೈಲ್, 103 ಸೂಪರ್‌ವೈಸರಿ ಹಾಗೂ 26 ಸಬ್ ಡಿವಿಷನ್ ಮೊಬೈಲ್ ಕೇಂದ್ರಗಳನ್ನಾಗಿ ವಿಂಗಡಿಸಲಾಗಿದೆ. ಒಟ್ಟಾರೆ ನಗರದ 28 ಕ್ಷೇತ್ರಗಳಿಗೆ ನಡೆಯಲಿರುವ ಮತದಾನದಂದು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

    15 ಸಾವಿರ ಪೊಲೀಸರ ನಿಯೋಜನೆ

    ಹೋಂಗಾರ್ಡ್ಸ್ ಸೇರಿ ಸುಮಾರು 15 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಮತದಾನದ ಭದ್ರತಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿ ಇಬ್ಬರು ವಿಶೇಷ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 24 ಡಿಎಸ್ಪಿ, 67 ಎಸಿಪಿಗಳು, 248 ಇನ್‌ಸ್ಪೆಕ್ಟರ್‌ಗಳು, 881 ಪಿಎಸ್‌ಐಗಳು, 1,020 ಎಎಸ್‌ಐಗಳು, 9,971 ಕಾನ್ಸ್‌ಟೆಬಲ್ಗಳು, 2,565 ಹೋಮ್ಗಾರ್ಡ್ಸ್‌ಗಳು ಹಾಗೂ 49 ಸಿಎಪಿಎ್ ಪೊಲೀಸರು ಭದ್ರತೆಗಾಗಿ ನಿಯೋಜಿಸಲಾಗಿದೆ.

    ನಗರದ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕೇಂದ್ರಿಯ ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಫಥಸಂಚಲನ ನಡೆಸುವ ಮೂಲಕ ಮತದಾರರ ಆತ್ಮಸ್ಥೆರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಎಂಟು ವಿಭಾಗಗಳಲ್ಲಿ 123 ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. 131 ಫ್ಲೈಯಿಂಗ್ ಸ್ಕ್ವಾಡ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಇದರ ಜತೆಗೆ ಸೋಮವಾರ ಸಂಜೆ 6 ರಿಂದ ಮೇ 10 ಮಧ್ಯರಾತ್ರಿವರೆಗೆ ನಗರದಲ್ಲಿ ಮದ್ಯಪಾನ ಮಾರಾಟ ನಿಧಿಷೇಸಲಾಗಿದೆ ಎಮದು ತಿಳಿಸಿದ್ದಾರೆ.

    Police Force

    ಗೂಂಡಾ ಕಾಯ್ದೆಯಡಿ 28 ಮಂದಿ ಬಂಧನ

    ನಗರದಲ್ಲಿರುವ 7,493 ರೌಡಿಗಳಿಗೆ ಶಾಂತಿಭಂಗ ಉಂಟು ಮಾಡದಂತೆ ಎಚ್ಚರಿಕೆ ನೀಡುವುದರ ಜತೆಗೆ ೨೮ ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ನಗರದ ೪೬೦ ಕಡೆಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದ್ದು, 7,761 ಪರವಾನಿಗಿ ಪಡೆದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜತೆಗೆ ವಿಶೇಷ ಕಾರ್ಯಚರಣೆ ಕೈಗೊಂಡು 4,818 ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ.

    ಇದುವರೆಗೂ ನಗರ ಪೊಲೀಸರು 10 ಕೋಟಿ ರೂ.ಗಳಿಗೂ ಹೆಚ್ಚು ನಗದು, 28.5ಕೆ.ಜಿಯಷ್ಟು ಬಂಗಾರದ ವಡವೆಗಳು, 140 ಕೆ.ಜಿ ಬೆಳ್ಳಿ ಆಭರಣಗಳು, 9 ಕೋಟಿ ರೂಪಾಯಿ ಮೌಲ್ಯದ ಉಚಿತ ಉಡುಗೊರೆಗಳು ಹಾಗೂ 29 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ಸೇರಿ 64 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

    Rowdy parade

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts