ದಯವಿಟ್ಟು ನಮ್ಮನ್ನು ಕ್ಷಮಿಸಿ..ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ

pratap simha
Published on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?:

ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್​​ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.

ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ‌್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್​​ ಮಾಡಿ ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ಮಾಡಲಾಗಿತ್ತು. ಇದರ ಫಲಿತಾಂಶ ಮೇ 13ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ನಂತರ ಸಿಎಂ ಸ್ಥಾನದ ಹಗ್ಗಾಜಗ್ಗಾಟದಲ್ಲಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿ.ಕೆ ಶಿವಕುಮಾರ್​​ ಅವರಿ ಡಿಸಿಎಂ ಸ್ಥಾನ ಎಂದು ಘೋಷಣೆ ಮಾಡಲಾಗಿದ್ದು, ಮೇ 18 ರಂದು ಇತರ ನಾಯಕರುಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net