ಮಂಡ್ಯ: ಮಕ್ಕಳಲ್ಲಿ ಅಡಗಿರುವ ಆಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ, ಸಾಂಸ್ಕೃತಿಕ, ಕಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.
ನಗರದ ಪೊಲೀಸ್ ಕಾಲನಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಪ್ರೌಢಶಾಲೆಗಳ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣ, ಕ್ರೀಡೆ ಕೊಟ್ಟರೆ ಸಾಲದು. ಅವರಲ್ಲಿ ಆಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸ ಮಾಡಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಶೇಕಡಾವಾರು ಅಂಕಗಳಲ್ಲಿ ಗುರುತಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ಬದಲಿಗೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕಾಗಿದೆ ಎಂದರು.
ಮಂಡ್ಯ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ಸ್ಪರ್ಧೆಯಲ್ಲಿ ಸೋತವರು ಕುಗ್ಗಬಾರದು, ಗೆದ್ದವರು ಹಿಗ್ಗಬಾರದು. ತಾಲೂಕು ಮಟ್ಟದಲ್ಲಿ ಗೆದ್ದ ವಿದ್ಯಾರ್ಥಿಗಳು ಮುಂದಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಇಂದಿನಿಂದಲೇ ಕಾರ್ಯೋನ್ಮುಖರಾಗಬೇಕೆಂದು ತಿಳಿ ಹೇಳಿದರು.
ಡಯಟ್ ಉಪನಿರ್ದೇಶಕ ಪುರುಷೋತ್ತಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಎಚ್.ಶಿವರಾಮೇಗೌಡ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ದೇವರಾಜು, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಣ್ಣ ಮಂಗಲ, ಕಾರ್ಯದರ್ಶಿ ಶಿವಕುಮಾರ, ಉಪಾಧ್ಯಕ್ಷೆ ಸುರೇಖಾ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಶಿವರಾಮು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂದೀಶ್, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗರಾಜು ಇತರರಿದ್ದರು.
ಪ್ರತಿಭೆ ಮೂಲಕವೂ ಭವಿಷ್ಯ ರೂಪಿಸಿಕೊಳ್ಳಲಿ: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್ ಹೇಳಿಕೆ
You Might Also Like
ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs
Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…
ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face
Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…
ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring
Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್ ಆಗಿದ್ದಾರೆ,…