

ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕೋಡಿ ಶ್ರೀರಾಮ ವಿದ್ಯಾಕೇಂದ್ರ ಆಶ್ರಯದಲ್ಲಿ ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕೋಡಿ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಶುಕ್ರವಾರ ನಡೆಯಿತು.
ವಿದ್ಯಾಕೇಂದ್ರ ಸಂಚಾಲಕ ಕೆ.ನಾಗೇಶ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭಾ ಸದಸ್ಯ ಮೊಹಮ್ಮದ್ ಅಶ್ಫಾಕ್ ಕಾರ್ಯಕ್ರಮ ಉದ್ಘಾಟಿಸಿದರು.
ನೋಡಲ್ ಅಧಿಕಾರಿ ಶೇಖರ್ ಪಡುಕೋಣೆ, ಸಂಪನ್ಮೂಲ ವ್ಯಕ್ತಿ ಸಂತೋಷ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕ ಸಂಘದ ಕಾರ್ಯದರ್ಶಿ ಪಿಯೂಸ್ ಡಿಸೋಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಖಜಾಂಚಿ ಶ್ರೀನಾಥ್ ಪೂಜಾರಿ, ಪತ್ರಕರ್ತ ಬಿ. ರಾಘವೇಂದ್ರ ಪೈ, ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ ಪಾಳ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರೇಖಾ ಮತ್ತು ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲ ಜಿತೇಂದ್ರ ಹಾಗೂ ವಿದ್ಯಾರ್ಥಿ ಮುಖಂಡ ಸೃಜನ್ ಪೂಜಾರಿ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಣಿತಾ ಸ್ವಾಗತಿಸಿದರು. ಸಂತೋಷ್ ಕುಮಾರ್ ಶೆಟ್ಟಿ ಪ್ರಸ್ತಾವವನೆಗೈದರು. ಮಂಜುನಾಥ ಪಾಳ್ ವಂದಿಸಿದರು. ಮಹೇಶ್ ವಕ್ವಾಡಿ ಮತ್ತು ನಾಗರತ್ನ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.