More

    ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

    ತಿಕೋಟಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ ಹೇಳಿದರು.

    ತಿಕೋಟಾದ ಕನಕದಾಸ ಮಂಗಲ ಕಾರ್ಯಾಲಯದಲ್ಲಿ ಜಿಪಂ, ಶಾಲೆ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ವಿಜಯಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ತಿಕೋಟಾದ ಖಾಸಗಿ ಶಾಲೆಗಳ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ಲಸ್ಟರ್‌ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ ಹೊಂದಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದು ತಿಳಿಸಿದರು.

    ಜಗದೀಶಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷೆ ಪ್ರಭಾವತಿ ನಾಟೀಕಾರ, ಪ್ರಕಾಶ ಗಣಿ, ಎಂ.ಎಸ್.ಭೂಸಗೊಂಡ ಮಾತನಾಡಿದರು. ಬಾಬುರಾವ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಕಿಸಾನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಹಂಜಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಜಾತ ಬಾಗಲಕೋಟ, ವಿದ್ಯಾ ಸವನಳ್ಳಿ, ರಾಮರಾವ ದೇಸಾಯಿ, ಲೇಪು ಕೊಣ್ಣೂರ, ಈರಪ್ಪ ತೇಲಿ, ಮಾಳು ಗೂಗದಡ್ಡಿ, ಸುರೇಶ ಕೊಣ್ಣೂರ, ಶಿವಾನಂದ ಹಂಜಗಿ, ಸಚಿನ್ ತಳವಾರ, ಮಲ್ಲು ಕುರ್ಪಿ, ಮಲ್ಲಯ್ಯ ಹಿರೇಮಠ ಇತರರಿದ್ದರು.

    ತಿಕೋಟಾ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ಅಂದಾಜು 25 ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts