ಮಕ್ಕಳ ಪ್ರತಿಭೆಗೆ ವೇದಿಕೆ ಪ್ರತಿಭಾ ಕಾರಂಜಿ

pratibha karanji
ಪ್ರತಿಭಾ ಕಾರಂಜಿಗೆ ಶ್ರೀ ಪ್ರಸನ್ನನಾಥ ಸ್ವಾಮೀಜಿ ಚಾಲನೆ ನೀಡಿದರು. ಎಸ್.ಶಿವಕುಮಾರ್, ಮೋಹನ್, ನಾಗರಾಜ, ಧನಂಜಯ, ಎಸ್.ಎಚ್.ಸುರೇಶ್ ಇತರರಿದ್ದರು.
Published on

ಶಿವಮೊಗ್ಗ: ಹಿಂಜರಿಕೆ ಎಂಬುದು ಶತ್ರುವಿದ್ದಂತೆ. ವಿದ್ಯಾರ್ಥಿಗಳು ಅದನ್ನು ತೊಡೆದು ಆತ್ಮವಿಶ್ವಾಸದಿಂದ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಬೇಕೆಂದು ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಬಿಜಿಎಸ್ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಿದ್ದೇಶ್ವರ ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಅದರ ಅನಾವರಣಕ್ಕೆ ಅವಕಾಶ ನೀಡುವ ಸಲುವಾಗಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.
ಭಾರತೀಯ ಸಂಸ್ಕೃತಿ, ಕಲೆಗೆ ಪ್ರತಿಭಾ ಕಾರಂಜಿ ಮೂಲಕ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಗ್ರಾಮೀಣ ಜನಪದ ಕಲೆಗಳ ಸೊಗಡು ಅಭೂತಪೂರ್ವವಾದದು. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪಾಲಕರ ಕರ್ತವ್ಯ. ವಿಭಾಗ, ವಲಯ, ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಆಯೋಜಿಸಿ ಮಕ್ಕಳಿಗೆ ವೇದಿಕೆ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಬಿಇಒ ನಾಗರಾಜ, ಮೇಯರ್ ಎಸ್.ಶಿವಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಡಿ.ಮೋಹನ್‌ರೆಡ್ಡಿ, ಬಿಆರ್‌ಸಿ ಮೋಹನ್, ಸಿಆರ್‌ಪಿ ಧನಂಜಯ, ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪಗೌಡ, ಪ್ರಾಚಾರ್ಯ ಎಸ್.ಎಚ್.ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net