More

    ಶಿಕ್ಷಣದಿಂದ ಸಮುದಾಯ ಅಭಿವೃದ್ಧಿ


    ಹುಣಸೂರು: ಸಣ್ಣಪುಟ್ಟ ಸಮುದಾಯಗಳು ಸಂಘಟನಾತ್ಮಕ ಹೋರಾಟ ನಡೆಸಿದಲ್ಲಿ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಅಭಿಪ್ರಾಯಪಟ್ಟರು.

    ನಗರದ ಪುಟ್ಟಸ್ವಾಮಪ್ಪ ಕಲ್ಯಾಣಮಂಟಪದಲ್ಲಿ ಶನಿವಾರ ಅಖಿಲ ನಾಮಧಾರಿ ಸಮಾಜದ ತಾಲೂಕು ಘಟಕದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳು ರಾಜಕೀಯ ಅಧಿಕಾರ ಪಡೆಯಬೇಕಾದ ಅಗತ್ಯತೆ ಇದೆ. ಆದರೆ ನಮ್ಮದು ಸಣ್ಣಪುಟ್ಟ ಸಮಾಜ ಎನ್ನುವ ಕೀಳರಿಮೆ ಅವನ್ನು ಕಾಡುತ್ತಿರುತ್ತದೆ. ಇಂತಹ ಕೀಳರಿಮೆ ಬಿಡಬೇಕು. ನಿಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಉನ್ನತ ಸ್ಥಾನಮಾನ ಪಡೆಯುವಂತೆ ಮಾಡಬೇಕು. ಸಂಘಟನೆ ಮತ್ತು ಶಿಕ್ಷಣದಿಂದ ಮಾತ್ರ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಬಲತೆ ಗಳಿಸಲು ಸಾಧ್ಯ ಎಂದರು.

    ನಾಮಧಾರಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಖರೀದಿಸಲು 28 ಲಕ್ಷ ರೂ.ನೀಡುತ್ತೇನೆ ಎಂದು ಭರವಸೆ ನೀಡಿದ ಶಾಸಕರು, ಕಟ್ಟಡ ನಿರ್ಮಾಣಕ್ಕೂ ಸರ್ಕಾರದಿಂದ ಅನುದಾನ ಒದಗಿಸಿಕೊಡುವುದಾಗಿ ತಿಳಿಸಿದರು.

    ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ 60ಕ್ಕೂ ಹೆಚ್ಚು ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ತಾಲೂಕು ಅಧ್ಯಕ್ಷ ಅಗ್ರಹಾರ ಚಂದ್ರೇಗೌಡ, ಕೇಂದ್ರ ಸಮಿತಿ ಅಧ್ಯಕ್ಷ ಚನ್ನರೇವಣ್ಣ, ಹೆಬ್ಬಾಲೆ ವಲಯದ ಅಧ್ಯಕ್ಷ ಕುಮಾರ್, ಮುಖಂಡರಾದ ರಂಜಿತಾ ಚಿಕ್ಕಮಾದು, ಯೋಗಣ್ಣ, ತಟ್ಟೆಕೆರೆ ಶ್ರೀನಿವಾಸ್, ಸರ್ವೇಯರ್ ಮಾದೇಗೌಡ, ಎಲ್‌ಐಸಿ ಚಂದ್ರಪ್ಪ, ಬಸವರಾಜು, ಗಿರೀಶ್, ರಾಮೇಗೌಡ, ಅರುಣ್, ದಾಸ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts