

ಕುಂದಾಪುರ: ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘ ವತಿಯಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಘದ ತಲ್ಲೂರಿನ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಇತರ ಸಹಕಾರಿ ಸಂಘಗಳ ನೌಕರರ ಒಕ್ಕೂಟ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಮತ್ತು ಯೂನಿಯನ್ ಬ್ಯಾಂಕ್ ಸಹಾಯಕ ಮುಖ್ಯ ಪ್ರಬಂಧಕ ಮಹಾಲಿಂಗ ದೇವಾಡಿಗ ಶುಭಾಶಂಸನೆಗೈದರು.
ಸೇನೆಯಿಂದ ನಿವೃತ್ತರಾದ ಕ್ಯಾಪ್ಟನ್ ರಾಜೇಶ್ ದೇವಾಡಿಗ, ನಿರೂಪಣಾರತ್ನ ಪ್ರಶಸ್ತಿ ಪಡೆದ ರಾಮ ದೇವಾಡಿಗ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಘುರಾಮ್ ದೇವಾಡಿಗ ಆಲೂರು, ಅಗ್ನಿಪಥ್‌ನಿಂದ ಭಾರತೀಯ ಸೇನೆಗೆ ಆಯ್ಕೆಯಾದ ರೋಹಿತ್ ದೇವಾಡಿಗ ಕೆರ್ಗಾಲು, ರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಸಚ್ಚಿದಾನಂದ ದೇವಾಡಿಗ ಅಲೂರು ಅವರನ್ನು ಸನ್ಮಾನಿಸಲಾಯಿತು. ಸಂಘ ಉಪಾಧ್ಯಕ್ಷ ಚಂದ್ರಶೇಖರ ದೇವಾಡಿಗ, ಶಾಖಾ ವ್ಯವಸ್ಥಾಪಕ ಕರುಣಾಕರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ನಿರ್ದೇಶಕ ರಾಜೇಶ್ ದೇವಾಡಿಗ ತ್ರಾಸಿ ಪ್ರಸ್ತಾವಿಸಿದರು. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೇವಾಡಿಗ ಸ್ವಾಗತಿಸಿದರು. ಶೀಲಾವತಿ ದೇವಾಡಿಗ ವಂದಿಸಿದರು. ಶಿಕ್ಷಕ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ನಿರೂಪಿಸಿದರು.