More

    ಗುಣಮಟ್ಟದ ಶಿಕ್ಷಣದಿಂದ ಉತ್ತಮ ಫಲಿತಾಂಶ: ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿಕೆ

    ಮಂಡ್ಯ: ಗುಣಮಟ್ಟದ ಶಿಕ್ಷಣದಿಂದ ನಮ್ಮ ಸಂಸ್ಥೆಗೆ ಉತ್ತಮ ಫಲಿತಾಂಶ ಬಂದಿದೆ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿದರು.
    ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿಂದ ಆಯೋಜಿಸಿದ್ದ ಪಿಇಎಸ್ ಉತ್ಸವ, ಪ್ರತಿಭಾ ಪುರಸ್ಕಾರ, ಪಾರಂಪರಿಕ ದಿನೋತ್ಸವ-ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪದವಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಅತ್ಯುತ್ತಮ ಫಲಿತಾಂಶ ದಾಖಲಿಸಿ, ಕಾಲೇಜಿಗೆ ಮತ್ತು ಪಾಲಕರಿಗೆ ಕೀರ್ತಿ ತಂದಿದ್ದೀರಿ ಎಂದರು.
    ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆಂದು ನಮ್ಮ ತಾತ ಕೆ.ವಿ.ಶಂಕರಗೌಡ ಮತ್ತು ಅವರ ಗೆಳೆಯರು ಕಟ್ಟಿದ ಸಂಸ್ಥೆ ಇದಾಗಿದೆ, ನಾಟಕ ಪ್ರದರ್ಶನ ಮಾಡಿ, ರೈತರಿಂದ ದೇಣಿಗೆ ಸಂಗ್ರಹಿಸಿ, ಶ್ರಮಪಟ್ಟು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣ ಲಭಿಸುವಂತೆ ಮಾಡಿದರು. ಪದವಿ ಪಡೆದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯನ್ನು ಮರಿಯಬೇಡಿ. ಪಾಲಕರ ಆಶಯದಂತೆ ನೀವು ನಡೆದುಕೊಳ್ಳಿ. ನಿಮ್ಮ ಭವಿಷ್ಯದ ಜೀವನ ಯಶಸ್ಸು ಕಾಣಲಿ. ಪ್ರತಿಭಾವಂತರಾಗಿ ಸಾಧನೆ ಮಾಡಿ ಎಂದು ಆಶಿಸಿದರು.
    ಪಿಇಟಿ ಜಂಟಿ ಕಾರ್ಯದರ್ಶಿ ಕೆ.ಆರ್.ದಯಾನಂದ ಮತ್ತು ಪ್ರಾಂಶುಪಾಲ ಡಾ.ಎಂ.ಮಂಜುನಾಥ್ ಮಾತನಾಡಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕಿ ಡಾ.ವಿ.ಸವಿತಾ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಪ್ರೊ.ವೀರೇಶ್, ಪ್ರೊ.ಚಂದ್ರಶೇಖರ್, ಪ್ರೊ.ಗಿರೀಶ್, ಪ್ರೊ.ಸಂತೋಷ್, ಪ್ರೊ.ನಂದೀಶ್, ಪ್ರೊ.ಎಂ.ಶಿವಕುಮಾರ್, ಪ್ರೊ.ಡೇವಿಡ್, ಪ್ರೊ.ಶಾಂತರಾಜು, ಡಾ.ಅಮೃತವರ್ಷಿಣಿ, ಪ್ರೊ.ಭವ್ಯಾ, ಪ್ರೊ.ಜಯರಾಂ, ಪ್ರೊ.ಮರಿಯಯ್ಯ ಇತರರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts