ನಿಟ್ಟೆ ಕಾಲೇಜಿನಲ್ಲಿ ಪ್ರತ್ಯಾಹಾರ್ ಬೀದಿ ನಾಟಕ ಪ್ರದರ್ಶನ

blm
Published on

ಕಾರ್ಕಳ: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್‌ನ ಎಂಪವರ್ ಜಂಟಿಯಾಗಿ ಪ್ರತ್ಯಾಹಾರ್ ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆ ಕುರಿತ ಬೀದಿನಾಟಕ ಪ್ರದರ್ಶನ ಇತ್ತೀಚೆಗೆ ಕಾಲೇಜಿನ ಆವರಣದಲ್ಲಿ ನಡೆಯಿತು. ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ನಾಗೇಶ್ ಪ್ರಭು, ಡೀನ್ ಸ್ಟೂಡೆಂಟ್ ವೆಲ್ಫೇರ್ ಡಾ.ನರಸಿಂಹ ಬೈಲ್ಕೇರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಥಮ ವರ್ಷದ ಸಂಯೋಜಕ ಡಾ.ಜಾಯ್ ಮಾರ್ಟಿಸ್ ಅತಿಥಿಗಳಾಗಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಕೌನ್ಸಲಿಂಗ್, ವೆಲ್ಫೇರ್, ಟ್ರೈನಿಂಗ್ ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಕುಮಾರ್ ಮಾರ್ಗದರ್ಶನದಲ್ಲಿ ಕಾಲೇಜಿನ ಕೌನ್ಸೆಲರ್ ಅಂಕಿತ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net