More

    ಗೃಹಪ್ರವೇಶಕ್ಕೆ ಸಿದ್ದವಾದ ಪ್ರವೀಣ್ ನೆಟ್ಟಾರು ಕನಸಿನ ಮನೆ

    ಸುಳ್ಯ(ದಕ್ಷಿಣ ಕನ್ನಡ): ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ದವಾಗಿದೆ. ಇದೇ ತಿಂಗಳ 27ನೇ ತಾರೀಖಿನಂದು ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ.

    ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ. ಇದೇ ವೇಳೆ ಬೆಳಗ್ಗೆ 11 ಗಂಟೆಯಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ ಎಂದು ಆಮಂತ್ರಣ ಪತ್ರದಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ: ಬಸ್ಸಿನಲ್ಲಿ ಹಿಂದು ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಹಲ್ಲೆ

    ಪ್ರವೀಣ್ ನೆಟ್ಟಾರು ಅವರ ಮನೆಯ ಸದಸ್ಯರ ನಕ್ಷೆಯಂತೆ ಮನೆ ನಿರ್ಮಾಣ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕುಟಂಬ ವಾಸವಾಗಿದ್ದ ಜಾಗದಲ್ಲೇ ನೂತನ ಮನೆ ನಿರ್ಮಿಸಲಾಗಿದೆ. 2,700 ಚದರ ಅಡಿ ಇರುವ ಈ ಮನೆಗೆ ಅಂದಾಜು 60 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಈ ಮನೆಯ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

    ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.

    ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts