More

    545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲು ಸಿದ್ಧ ಎಂದ ಪ್ರವೀಣ್ ಸೂದ್; ಯಾವಾಗ?

    ಬೆಂಗಳೂರು: 545 ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧ ಎಂಬುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಮಾತ್ರವಲ್ಲ ಅದು ಯಾವಾಗ ಎನ್ನುವ ಕುರಿತು ಕೂಡ ಅವರು ಮಾಹಿತಿ ನೀಡಿದ್ದಾರೆ. ಶನಿವಾರ ಟ್ವಿಟ್ ಮಾಡಿರುವ ಅವರು ಈ ಕುರಿತು ಹೇಳಿಕೊಂಡಿದ್ದಾರೆ.

    545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದೇವೆ. ಆದರೆ, ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ ಎಂಬುದಾಗಿ ಅವರು ತಿಳಿಸಿದ್ದಾರೆ. ಸಿಎಆರ್-ಡಿಎಆರ್ ಆರ್‌ಎಸ್‌ಐ, ಕೆಎಸ್‌ಆರ್‌ಪಿ ಸ್ಪೆಷಲ್ ಆರ್‌ಎಸ್‌ಐ, ಕೆಎಸ್‌ಐಎಸ್‌ಎಫ್ ಪಿಎಸ್‌ಐ ಹುದ್ದೆಗಳಿಗೆ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. 545 ಪಿಎಸ್‌ಐ ಹುದ್ದೆಗಳಿಗೂ ಮರು ಪರೀಕ್ಷೆ ನಡೆಸಲು ನಾವು ಸಿದ್ಧ ಎಂದು ತಿಳಿಸಿದ್ದಾರೆ.

    ಆದರೆ ಪ್ರಕರಣದ ಇತ್ಯರ್ಥವಾಗುವವರೆಗೂ ಮರು ಪರೀಕ್ಷೆ ನಡೆಸದಂತೆ ನ್ಯಾಯಾಲಯದ ನಿರ್ಬಂಧವಿದೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿದ್ದೇವೆ. ಇನ್ನು ಈ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆ ನಡೆಸಿದ ಬಳಿಕ ಕೂಡಲೇ 402 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆಸುವುದಾಗಿ ಟ್ವೀಟ್​ ಮಾಡಿದ್ದಾರೆ.

    ಕಳೆದ ವರ್ಷ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿತ್ತು, ಇದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ನೇಮಕಾತಿ ವಿಭಾಗದ ಎಡಿಜಿಪಿ ಸೇರಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಅಭ್ಯರ್ಥಿಗಳು ಸೇರಿ 50ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

    ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

    ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?

    ಗಂಡನ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡ್ತಿ; ವಾಪಸ್​ ಬಾ ಎಂದು ತವರಿಗೆ ಹೋಗಿ ಕರೆದಿದ್ದೇ ತಪ್ಪಾಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts