More

    ಪೊಲೀಸರ ವರ್ಗಾವಣೆ ವೇಳೆ ಶಿಫಾರಸು ನಿರ್ಲಕ್ಷ್ಯ

    ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆ ವೇಳೆ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ ಶಿಫಾರಸುಗಳನ್ನು ನಿರ್ಲಕ್ಷಿಸಲಾಗುವುದು ಎಂದು ರಾಜ್ಯ ಪೊಲೀಸ್ ಸಿಬ್ಬಂದಿ ನೇಮಕಾತಿ ಮಂಡಳಿ ಮುಖ್ಯಸ್ಥರೂ ಆದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೈಕೋರ್ಟ್​ಗೆ ಭರವಸೆ ನೀಡಿದ್ದಾರೆ.

    ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ನಿಯಮಬಾಹಿರವಾಗಿ ಶಿಫಾರಸು ಮಾಡಿರುವ 24 ಜನಪ್ರತಿನಿಧಿಗಳ ವಿರುದ್ಧ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

    ಪ್ರವೀಣ್ ಸೂದ್ ಅವರ ಪ್ರಮಾಣಪತ್ರವನ್ನು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಪೊಲೀಸ್ ವರ್ಗಾವಣೆ ವಿಚಾರದಲ್ಲಿ ಹೈಕೋರ್ಟ್ ಹಾಗೂ ಸುಪ್ರಿಂಕೋರ್ಟ್ ತೀರ್ಪಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಇದೇ ರೀತಿಯ ಪ್ರಮಾಣಪತ್ರ ಸಲ್ಲಿಸಲು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಾಲಾವಕಾಶ ನೀಡಿದ ಪೀಠ, ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts