ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಸಿಎಂ ಸಿದ್ದರಾಮಯ್ಯ ಮನವಿ

blank

ಬೆಂಗಳೂರು: ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿರುವ ಸಿಎಂ ಸಿದ್ದರಾಮಯ್ಯ, ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ಪ್ರತಿಪಾದಿಸಿದ್ದಾರೆ.

blank

ಕರ್ನಾಟ ರಾಜ್ಯ ಹಜ್ ಸಮಿತಿ ಆಯೋಜಿಸಿರುವ 2025ನೇ ಸಾಲಿನ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟಿಸಿ ಸೋಮವಾರ ಮಾತನಾಡಿದರು.

ಈ ವರ್ಷ ಸುಮಾರು 8,635 ಜನ ಯಾತ್ರಿಕರು ಹಜ್ ಯಾತ್ರೆಗೆ ಹೊರಟಿದ್ದು, ಮುಂದಿನ ತಿಂಗಳ 15ರವರೆಗೆ 27 ವಿಮಾನಗಳಲ್ಲಿ ಪ್ರಯಾಣ ಕೈಗೊಳ್ಳಲಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನ ತಮ್ಮ ಜೀವತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕೆಂಬುದು ಅವರ ಪವಿತ್ರ ಆಚರಣೆಗಳಲ್ಲಿ ಒಂದಾಗಿದೆ. ಹಜ್ ಯಾತ್ರಿಕರೆಲ್ಲರಿಗೂ ಅವರ ಪ್ರಯಾಣ ಸುಖಕರವಾಗಿಲಿ ಎಂದು ಹಾರೈಸಿದರು.

ಒಂದು ಧರ್ಮದ ಓಲೈಕೆ ಇಲ್ಲ:

ನಮ್ಮ ಸರ್ಕಾರ ಎಂದಿಗೂ ಒಂದು ವರ್ಗ, ಧರ್ಮದ ಜನರನ್ನು ಓಲೈಸಲು ಯಾವುದೇ ಕಾರ್ಯಕ್ರಮ ಕೈಗೊಳ್ಳುವುದಿಲ್ಲ. ಕನ್ನಡ ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂಬುದು ನಮ್ಮ ಆಶಯ. ದೇಶದಲ್ಲಿ ವಿವಿಧ ಜಾತಿ ಧರ್ಮಗಳಿಗೆ ಸೇರಿದವರಾದರೂ, ನಾವೆಲ್ಲರೂ ಮೊದಲು ಮಾನವರಾಗಬೇಕು. ಯಾವ ಧರ್ಮವೂ ಮನುಷ್ಯತ್ವವನ್ನು ಹೊರತು ಮೃಗೀಯ ತತ್ವವನ್ನು ಬೋಧಿಸುವುದಿಲ್ಲ. ಮಾನವತಾ ಸಮಾಜವನ್ನು ನಿರ್ಮಿಸಬೇಕು. ಸೌಹಾರ್ದಯುತ ಸಮಾಜ ನಿರ್ಮಾಣವಾಗಬೇಕಾದರೆ ಪರಸ್ಪರ ಗೌರವಾದರಗಳು ಇರಬೇಕು ಎಂದು ತಿಳಿಸಿದರು.

ರಾಜ್ಯದ ಬಜೆಟ್ 4 ಲಕ್ಷದ 9 ಸಾವಿರ ಕೋಟಿಯಿದ್ದರೆ, ಅದರಲ್ಲಿ ಮುಸಲ್ಮಾನರಿಗೆ ನೀಡಿರುವುದು 4,500 ಕೋಟಿ ಮಾತ್ರ. ಅದು ದೊಡ್ಡದಲ್ಲ. ಅವರವ ಪಾಲನ್ನು ಅವರಿಗೆ ಕೊಡಬೇಕು. ಈ ದೇಶದ ಸಂಪತ್ತು ಎಲ್ಲರಿಗೂ ಹಂಚಿಕೆಯಾಗಬೇಕು. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಜಾತಿ ಹೋಗಲು ಸಾಧ್ಯವಾಗುತ್ತದೆ. ಸಮಾನತೆಯಿಂದ ಕೂಡಿದ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ವಿವರಿಸಿದರು.

ಮಂಗಳೂರು, ಕಲಬುರ್ಗಿಯಲ್ಲಿ ಹಜ್ ಭವನ:

ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಮೇ 16 ರಂದು ಶಂಕುಸ್ಥಾಪನೆ ಮಾಡಲಾಗುವುದು. ಜಮೀರ್ ಅಹಮ್ಮದ್ ಖಾನ್ ಅವರು ಕಲಬುರಗಿಯಲ್ಲಿ ಹಾಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದರು. ಬೆಂಗಳೂರಿನಲ್ಲಿ ಹಜ್ ಭವನಕ್ಕೆ ಬರುವ ಪ್ರವಾಸಿಗರು ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಈ ಬಾರಿ 10 ಕೋಟಿ ಅನುದಾನ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಸ್ವಾಭಿಮಾನದ ಬದುಕಿಗೆ ಶಿಕ್ಷಣ ಪಡೆಯಿರಿ:

ಮುಸಲ್ಮಾನರಲ್ಲಿ ಶಿಕ್ಷಣದ ಮಟ್ಟ ಹೆಚ್ಚಾಗಬೇಕು. ಸಾಚಾರ್ ಸಮಿತಿ ವರದಿಯಲ್ಲಿ ಶಿಕ್ಷಣದ ಪ್ರಮಾಣ ಬಹಳ ಕಡಿಮೆ ಇದೆ ಎಂದು ತಿಳಿಸಲಾಗಿದೆ. ಶಿಕ್ಷಣ ಇಲ್ಲದಿದ್ದರೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…