More

    ಪ್ರವಾಹ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ

    ವಿಜಯಪುರ: ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಜಲಮೂಲಗಳು ಚೇತರಿಸಿಕೊಂಡಿದ್ದು, ಪ್ರವಾಹದಿಂದ ಬಾಧಿತವಾಗುವ ಪ್ರದೇಶಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲಿಸಿದರು.

    ಮಂಗಳವಾರ ಮುದ್ದೇಬಿಹಾಳ ಹಾತೂ ನಿಡಗುಂದಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮುನ್ನೆಚ್ಚರಿಕೆ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ನಿಡಗುಂದಿ ತಾಲೂಕಿನ ಮಸೂತಿ, ಮುದೂರ, ಗಂಗೂರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಅರಳದಿನ್ನಿ ಸೇತುವೆ ಮೇಲೆ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿನ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಆಲಮಟ್ಟಿ ಕೃಷ್ಣಾ ದಡದ ನದಿ ಪಾತ್ರದ ಹಳ್ಳಿಗಳಲ್ಲಿ ಈ ಕುರಿತು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿ ಜಾಗೃತಗೊಳಿಸಬೇಕು ಎಂದು ಹೇಳಿದರು.

    ಮುದ್ದೇಬಿಹಾಳ ತಾಲೂಕಿನ ಮುದೂರ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹಕ್ಕೆ ಬಾಧಿತವಾಗುವ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಎಲ್ಲ ಕ್ರಮಗಳನ್ನು ಕೈಗೊಂಡು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಯಲ್ಲಿರುವಂತೆ ಅವರು ಸೂಚನೆ ನೀಡಿದರು.

    ಯಾವುದೇ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕು. ವಿಪತ್ತು ನಿರ್ವಹಣಾ ನಿಯಮನುಸಾರ ಪರಿಹಾರವನ್ನು ತುರ್ತಾಗಿ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಜಿಪಂ ಸಿಇಒ ರಾಹುಲ್ ಶಿಂಧೆ, ನಿಡಗುಂದಿ ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ನಿಡಗುಂದಿ ತಾಪಂ ಇಒ ವಿ.ಎಸ್.ಹಿರೇಮಠ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts