More

    ಸಂಭಾವ್ಯ ಅತಿವೃಷ್ಟಿ ಹಾನಿ ತಡೆಗೆ ಮುಂಜಾಗ್ರತೆ

    ಧಾರವಾಡ: ಮುಂಗಾರು ಮಳೆಯಿಂದ ಅತಿವೃಷ್ಟಿ, ಪ್ರವಾಹ ಉಂಟಾದರೆ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಿದ್ಧವಿದೆ. ಸಾರ್ವಜನಿಕರಿಗೆ ತೊಂದರೆಯಾಗದ0ತೆ ಮುಂಜಾಗ್ರತೆ ವಹಿಸಲು ಪ್ರತಿ ತಾಲೂಕಿಗೆ ಹಿರಿಯ ಅಽಕಾರಿಯನ್ನು ನೋಡಲ್ ಅಽಕಾರಿಯಾಗಿ ನೇಮಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಅಧ್ಯಕ್ಷ ಹಾಗೂ ಜಿಲ್ಲಾಽಕಾರಿ ಗುರುದತ್ತ ಹೆಗಡೆ ಹೇಳಿದರು.
    ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರೈತರು ಬಿತ್ತನೆಗೆ ಭೂಮಿ ಸಿದ್ಧಗೊಳಿಸುತ್ತಿದ್ದಾರೆ. ಅತಿವೃಷ್ಟಿ ನಿರ್ವಹಿಸಲು ತಾಲೂಕು ಆಡಳಿತಗಳು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಬೇಕು. ೫ ವರ್ಷಗಳಲ್ಲಿ ಪ್ರವಾಹದಿಂದಾಗಿ ಹಾನಿ, ತೊಂದರೆಯಾಗಿರುವ ಪ್ರದೇಶಗಳನ್ನು ತಹಸೀಲ್ದಾರ್ ಮತ್ತು ತಾ.ಪಂ. ಇಒಗಳು ಗುರುತಿಸಿ ಅಲ್ಲಿ ಭೇಟಿ ನೀಡಿ ಪರಿಶೀಲಿಸಬೇಕು. ಹಾನಿ ಮರುಕಳಿಸದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ವರದಿ ಸಲ್ಲಿಸಬೇಕು ಎಂದರು.
    ನಗರ ಹಾಗೂ ಗ್ರಾಮ ವ್ಯಾಪ್ತಿಯ ಕೆರೆಗಳನ್ನು ಪರಿಶೀಲಿಸಿ ಸುರಕ್ಷತೆಯನ್ನು ಖಾತರಿ ಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹ, ಹೆಚ್ಚುವರಿ ನೀರು ಹೊರಹಾಕಲು ಸೂಕ್ತ ಮಾರ್ಗ, ಕೆರೆ ದಂಡೆ ಭದ್ರವಾಗಿರುವ ಬಗ್ಗೆ ಗ್ರಾ.ಪಂ., ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜಿಲ್ಲಾಡಳಿತಕ್ಕೆ ವಾರದಲ್ಲಿ ವರದಿ ಸಲ್ಲಿಸಬೇಕು. ಕೆರೆ ಹಾನಿಯ ಬಗ್ಗೆ ದೂರುಗಳು ಬಂದರೆ ಸಂಬAಽಸಿದ ಅಽಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಕಾರಿಗಳು ಎಚ್ಚರಿಸಿದರು.
    ನಗರ ಹಾಗೂ ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ದುರಸ್ತಿ ಕಾರ್ಯ ಮಾಡಬೇಕು. ನೀರು ಸಂಗ್ರಹವಾಗಿ ನಿಲ್ಲದಂತೆ ಮತ್ತು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಸ್ಥಳೀಯ ಜನಪ್ರತಿನಿಽಗಳ, ಗ್ರಾಮಸ್ಥರ ಸಹಕಾರ ಪಡೆದು ವಿಪತ್ತು ನಿರ್ವಹಣೆ ಬಗ್ಗೆ ಜನ ಜಾಗೃತಿ ಮೂಡಿಸಬೇಕು ಎಂದರು.

    • ಜೂ. ೧ಕ್ಕೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ:
      ಜೂ. ೧ಕ್ಕೆ ಆಂಧ್ರದ ವಿಜಯವಾಡದಿಂದ ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಆಗಮಿಸಲಿದೆೆ. ಜಿಲ್ಲೆಯಲ್ಲಿ ಈ ಹಿಂದೆ ಪ್ರವಾಹ ಪೀಡಿತವಾಗಿದ್ದ ಪ್ರದೇಶಗಳ ಸುರಕ್ಷತೆ ಮತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನದ ಮೂಲಕ ಜನಜಾಗೃತಿ ಮೂಡಿಸಲಿದ್ದಾರೆ ಎಂದರು.
    • ಬೀಜ, ಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ:
      ಜಿಲ್ಲೆಯ ರೈತರಿಗೆ ಅಗತ್ಯ ಗೊಬ್ಬರ, ಬೀಜ ಮತ್ತು ಕೀಟನಾಶಕ ವಿತರಣೆಗೆ ಸೂಕ್ತ ಕ್ರಮ ವಹಿಸಬೇಕು. ಕೃಷಿ ಅಽಕಾರಿಗಳು ಕೃಷಿ ಪರಿಕರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಮಾರಾಟ ದರ, ದಾಸ್ತಾನು ಪರಿಶೀಲಿಸಬೇಕು. ನಕಲಿ ಬೀಜ, ಗೊಬ್ಬರ ವಿತರಣೆ ಆಗದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಽಕಾರಿ ಸೂಚಿಸಿದರು.
      ಅಪರ ಜಿಲ್ಲಾಽಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ಅತಿವೃಷ್ಟಿಯಿಂದ ತೊಂದರೆಯಾದರೆ ಬಾಽತರಿಗೆ ಆಶ್ರಯ ಕಲ್ಪಿಸಲು ಕಾಳಜಿ ಕೇಂದ್ರ ತೆರೆಯಬೇಕಾಗುತ್ತದೆ. ಗ್ರಾಮ ಮತ್ತು ನಗರ ಮಟ್ಟದಲ್ಲಿ ಕಾಳಜಿ ಕೇಂದ್ರ ತೆರೆಯಲು ಸೂಕ್ತ ಕಟ್ಟಡ ಗುರುತಿಸಬೇಕು ಎಂದರು.
      ಉಪ ವಿಭಾಗಾಽಕಾರಿ ಅಶೋಕ ತೇಲಿ ಮಾತನಾಡಿ, ಜಿ.ಪಂ. ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶ್ರವಣಕುಮಾರ ನಾಯಕ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳು, ತಹಸೀಲ್ದಾರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts