

ಹಾಸನ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎನ್ನುವ ಅವಶ್ಯಕತೆಯಿಲ್ಲ. ಮುಂದಿನ ದಿನಗಳಲ್ಲಿ ಅವರೇ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ...
ಹೀಗೆಂದು ಶಾಸಕ ಪ್ರೀತಂ ಜೆ.ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಅವರು ಸರ್ಕಾರದ ಕಾರ್ಯಕ್ರಮದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಪ್ರತಿಪಕ್ಷದಿಂದ ಕೇಳಿ ಬರುತ್ತಿದೆ. ಈ ನಡುವೆ ಪೀತಂ ಗೌಡರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಮೂರು ವರ್ಷ ಬಿ.ಎಸ್. ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿ. ನೇತೃತ್ವದಲ್ಲೇ 2023ರ ಚುನಾವಣೆ ಎದುರಿಸುತ್ತೇವೆ. ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ, ಯೋಗ್ಯತೆ ವಿಜಯೇಂದ್ರ ಅವರಿಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿರಿ ಡ್ರಗ್ಸ್ ಕೇಸ್; ಅಕುಲ್ ಬಾಲಾಜಿ, ಪ್ರಭಾವಿ ರಾಜಕಾರಣಿಯ ಪುತ್ರ ಸೇರಿ ಮೂವರಿಗೆ ಸಿಸಿಬಿ ನೋಟಿಸ್
ಮುಂದಿನ 3 ವರ್ಷ ಯಡಿಯೂರಪ್ಪರೇ ಸಿಎಂ. ಅವರ ನೇತೃತ್ವದಲ್ಲೇ 2023ರ ಚುನಾವಣೆ ಎದುರಿಸುತ್ತೇವೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎನ್ನುವುದು ಅಷ್ಟೇ ಸತ್ಯ. ನಾನು ಹೇಳಿದ ಭವಿಷ್ಯ ಯಾವತ್ತೂ ಸುಳ್ಳಾಗುವುದಿಲ್ಲ. 120 ಶಾಸಕರು ಯಡಿಯೂರಪ್ಪರ ಜತೆಗಿದ್ದೇವೆ ಎಂದರು.
ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಸಿಎಂ ದೆಹಲಿಗೆ ತೆರಳಿದ್ದಾರೆ. ಶಾಸಕನಾಗಿ ಯಡಿಯೂರಪ್ಪರ ಅಣತಿಯಂತೆ ಕೆಲಸ ಮಾಡುತ್ತಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು.