

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸೇನಾ ನೆಲೆ ಕಾರ್ಯಾಗಾರದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಪಟ್ಟಿಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್, ಸ್ಟೋರ್‌ಕೀಪರ್, ಫಿಟ್ಟರ್, ಸ್ಟೆನೋಗ್ರಾರ್ ಮತ್ತು ೈರ್‌ಮ್ಯಾನ್ ಹುದ್ದೆಗಳಿವೆ. ಇವೆಲ್ಲವರೂ ಗ್ರೂಪ್ ಸಿ ಮತ್ತು ಡಿ ದರ್ಜೆಗೆ ಸೇರಿದವುಗಳಾಗಿವೆ.
ಆದರೆ ನೇಮಕಾತಿ ಅಧಿಸೂಚನೆ ಪ್ರಕಾರ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಅದರಲ್ಲೂ ಗ್ರಾಮೀಣ ಪ್ರದೇಶದ ಅರ್ಹ ಕನ್ನಡಿಗರಿಗೆ ಪರೀಕ್ಷೆ ಎದುರಿಸಲು ಕಷ್ಟವಾಗಲಿದೆ ಎಂದು ಭಾಂಡಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇಂಗ್ಲಿಷ್, ಹಿಂದಿ ಜತೆಗೆ ಕನ್ನಡದಲ್ಲೂ ನೇಮಕಾತಿ ಅಧಿಸೂಚನೆ ಹೊರಡಿಸಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡಬೇಕು. ಸೇನಾ ಕರ್ನಾಟಕದಲ್ಲಿರುವ ಕಾರಣ ಕನ್ನಡಿಗರಿಗೆ ಆದ್ಯತೆ ನೀಡುವುದು ಸೂಕ್ತವಾಗಿದೆ.
ಕರ್ನಾಟಕದ ಜನರ ಹಿತಾಸಕ್ತಿಗೆ ಬೆಂಬಲಿಸುವ ಜತೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡಿಗರು ಒಳಗೊಳ್ಳುವಿಕೆಗೆ ಉತ್ತೇಜನ ನೀಡುತ್ತೀರಿ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್‌ರಿಗೆ ಬರೆದ ಪತ್ರದಲ್ಲಿ ನಾರಾಯಣಸಾ ಭಾಂಡಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.