More

    ಅಂಬೇಡ್ಕರ್ ಜಯಂತಿ ಸರಳ ಆಚರಣೆ ೧೪ಕ್ಕೆ

    ಬೀದರ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಏ.೧೪ರಂದು ಸರಳ ಮತ್ತು ಸಾಂಕೇತಿಕವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಗೋವಿಂದರಡ್ಡಿ ಹೇಳಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಕಳೆದ ವರ್ಷದಂತೆ ಪ್ರಸಕ್ತವೂ ಜಯಂತಿ ಆಚರಿಸೋಣ. ೧೪ರಂದು ಬೆಳಗ್ಗೆ ೯ಕ್ಕೆ ನಗರದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಮಾತನಾಡಿ, ಮೆರವಣಿಗೆಗೆ ಸಮಯ ನಿಗದಿಪಡಿಸಬೇಕು. ವಿವಿಧ ಬಡಾವಣೆಗಳಿಂದ ಬರುವ ಮೆರವಣಿಗೆಗೆ ಸ್ವಯಂ ಸೇವಕರನ್ನು ನಿಯೋಜಿಸಿದರೆ ಪೊಲೀಸರು ಅವರನ್ನು ಸಂಪರ್ಕಿಸಲು ಅನುಕೂಲವಾಗುತ್ತದೆ. ಮೆರವಣಿಗೆ ಸುಸೂತ್ರ ನಡೆಸಲು ಅವಕಾಶ ನೀಡಬೇಕು ಎಂದು ಕೋರಿದರು.

    ಆಸ್ಪತ್ರೆ ಮತ್ತು ನ್ಯಾಯಾಲಯ ಆವರಣದಂಥ ಪ್ರದೇಶಗಳಲ್ಲಿ ಡಿಜೆ ಹೆಚ್ಚು ಸೌಂಡ್ ಇಡಬಾರದು. ಚುನಾವಣಾ ನೀತಿ ಸಂಹಿತೆ ಪ್ರಕಾರ ರಾತ್ರಿ ೧೦ರೊಳಗೆ ಕಾರ್ಯಕ್ರಮ ಪೂರ್ಣಗೊಳಿಸಬೇಕು. ಒಳ್ಳೆಯ ಸಂದೇಶ ಮತ್ತು ಅಂಬೇಡ್ಕರ್ ಅವರ ಉತ್ತಮ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ಕೊಡುವಂತಾಗಬೇಕು ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸಿಂಧು ಎಚ್.ಎಸ್., ನಗರಸಭೆ ಆಯುಕ್ತ ಶಿವರಾಜ ರಾಠೋಡ್, ಸಮಾಜದ ಮುಖಂಡರಾದ ಅನೀಲಕುಮಾರ ಬೆಲ್ದಾರ್, ಬಾಬು ಪಾಸ್ವಾನ್, ಮಾರುತಿ ಬೌದ್ಧೆ, ರಾಜು ಕಡ್ಯಾಳ, ರಮೇಶ ಡಾಕುಳಗಿ, ಮಹೇಶ ಗೋರನಾಳಕರ್, ವಿಷ್ಣುವರ್ಧನ್ ವಾಲ್ದೊಡ್ಡಿ, ಕಲ್ಯಾಣರಾವ ಬೋಸ್ಲೆ, ರಾಜಕುಮಾರ ಬನ್ನೇರ್, ಸುಧಾಕರ ಎಕ್ಕಂಬೆಕರ್, ಫರ್ನಾಂಡೀಸ್ ಹಿಪ್ಪಳಗಾಂವ, ಪಂಡಿತ ಚಿದ್ರಿ, ವಿಜಯಕುಮಾರ ಸೋನಾರೆ, ಅಭಿ ಕಾಳೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts