5,8,9ನೇ ತರಗತಿ ಮೌಲ್ಯಂಕನಕ್ಕೆ ಸಿದ್ಧತೆ: ಪರೀಕ್ಷೆ ಬರೆಯಲಿರುವ 28 ಲಕ್ಷ ವಿದ್ಯಾರ್ಥಿಗಳು

blank

ಬೆಂಗಳೂರು ಹೈಕೋರ್ಟ್‌ನ ವಿಭಾಗೀಯ ಪೀಠವು 2023-14ನೇ ಸಾಲಿನ 5,,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಂಕನ ನಡೆಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮಾ.11ರಿಂದ 18ರ ವರೆಗೆ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಸೇರಿ 69,137 ಶಾಲೆಗಳ 28.14 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ 4 ವಿಷಯಗಳು, 8 ಮತ್ತು 9ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

5ನೇ ತರಗತಿಗೆ ಪ್ರತಿ ವಿಷಯಕ್ಕೆ 50 ಅಂಕಗಳಿಗೆ ಮೌಲ್ಯಂಕನ ನಡೆಸಲಾಗುವುದು. 40 ಅಂಕಗಳಿಗೆ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನೀಡಲಿದೆ. ಉಳಿದ 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಬೇಕು.

8ನೇ ತರಗತಿಗೆ 60 ಅಂಕಗಳಿಗೆ ಮೌಲ್ಯಂಕನ ನಡೆಸಲಾಗುವುದು. 50 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ ನಡೆಸಬೇಕು.
9ನೇ ತರಗತಿಗೆ ಭಾಷಾ ವಿಷಯಗಳನ್ನು (ಕನ್ನಡ, ಇಂಗ್ಲಿಷ್, ಹಿಂದಿ) 100 ಅಂಕಗಳಿಗೆ ಮತ್ತು ಕೋರ್ ವಿಷಯ (ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ) 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕು.

5ನೇ ತರಗತಿ ಪರೀಕ್ಷೆಗಳು ಮಾ.11ರಿಂದ 14ರ ವರೆಗೆ ಪ್ರತಿ ದಿನ ಮಧ್ಯಾಹ್ನ 2.30ರಿಂದ 4.30ರವರೆಗೆ, 8ಮತ್ತು 9ನೇ ತರಗತಿಗೆ ಮಾ.11ರಿಂದ 18ರ ವರೆಗೆ ಮಧ್ಯಾಹ್ನ ಕ್ರಮವಾಗಿ ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆ ಹಾಗೂ ಸಂಜೆ 5.15 ರವರೆಗೆ ನಡೆಯಲಿವೆ ಎಂದು ತಿಳಿಸಿದೆ.

Share This Article

Tea….ಒಂದು ತಿಂಗಳು ಟೀ ಕುಡಿಯುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?

Tea: ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಟೀ ಕುಡಿದರೆ ಸಿಗುವ ಸಂತೋಷ ಅಷ್ಟಿಷ್ಟಲ್ಲ. ಹಾಗಿದ್ದರೂ,…

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…