More

    ಮಳೆಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ: ಕರೊನಾ ಹಿನ್ನೆಲೆಯಲ್ಲಿ ವಿಶೇಷ ವ್ಯವಸ್ಥೆ

    ಬೆಂಗಳೂರು: ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಕಾರ್ಯಾಂಗ ಸಕಲ ಸಿದ್ಧತೆ ಆರಂಭಿಸಿದೆ. ಕರೊನಾ ಹಾವಳಿಯಿಂದ ಈ ಅಧಿವೇಶನವನ್ನು ವಿಶೇಷ ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಪೂರ್ವ ಸಿದ್ಧತೆಗಳು ಭರದಿಂದ ಸಾಗಿವೆ.

    ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ವಿಧಾನಸಭೆ ಹಾಗೂ ವಿಧಾನ ಪರಿಷತ್ತು ನಡೆಯುವ ಸಭಾಂಗಣಗಳ ಆಸನಗಳಿಗೆ ಗಾಜಿನ ಪರದೆ ಅಳವಡಿಸಿ ಸದಸ್ಯರನ್ನು ಪ್ರತ್ಯೇಕಿಸುವ ವ್ಯವಸ್ಥೆ ಮಾಡಲಾಗಿದೆ. ಕಾಲ-ಕಾಲಕ್ಕೆ ಸಭಾಂಗಣಗಳನ್ನು ಸ್ಯಾನಿಟೈಸ್ ಮಾಡಲು ಯೋಜನೆ ರೂಪಿಸಲಾಗಿದೆ.

    ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತಾಧಿಕಾರಿಗಳು, ಸಚಿವಾಲಯದ ಅಧಿಕಾರಿ/ಸಿಬ್ಬಂದಿ ಹಾಗೂ ಸಚಿವರ ಆಪ್ತ ಸಹಾಯಕರು, ಮಾಧ್ಯಮದವರು ಹಾಗೂ ಅಧಿವೇಶನಕ್ಕೆ ಬಳಸಿಕೊಳ್ಳುವ ಸಿಬ್ಬಂದಿಗಳಿಗೆ ಕರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ್ದು, ಶುಕ್ರವಾರದಿಂದ ಈ ಪರೀಕ್ಷೆ ನಡೆಸಲಾಗುತ್ತಿದೆ.

    ಸ್ಪೀಕರ್ ಸ್ಥಳ ಪರಿಶೀಲನೆ:
    ಪತ್ರಕರ್ತರಿಗೆ ಎರಡನೇ ಮಹಡಿಯಲ್ಲಿ ಆಸನಗಳನ್ನು ಅಳವಡಿಸಿದ್ದು, ಇಂಟರ್‌ನೆಟ್, ದೂರವಾಣಿ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮೊದಲ ಮಹಡಿಯಲ್ಲಿ ಹೊರಗಡೆ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲ ಸಿದ್ಧತೆಗಳನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಕ್ರವಾರ ಪರಿಶೀಲಿಸಲಿದ್ದಾರೆ.

    ಇದನ್ನೂ ಓದಿ: ಭಾವಿ ಪತಿಯೊಂದಿಗೆ ಮದುವೆ ನಿಶ್ಚಯ ಮುರಿದುಕೊಂಡ ಯುವತಿಗೆ ಮರುದಿನವೇ ಕಾದಿತ್ತು ಶಾಕ್!

    ನಾಲ್ವರು ಸಚಿವರು ಗೈರು:
    ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಾಲ್ವರು ಸಚಿವರು ಹಾಗೂ ಸೋಂಕು ದೃಢಪಟ್ಟ ಶಾಸಕರು ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆಹಾರ ಸಚಿವ ಕೆ.ಗೋಪಾಲಯ್ಯ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ ಅವರಿಗೆ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ಕಾಲ ಅಧಿವೇಶನದಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.

    ಚೇತರಿಸಿಕೊಂಡವರು:
    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಶ್ರೀರಾಮುಲು, ಡಾ.ಸುಧಾಕರ್, ಸಿ.ಟಿ.ರವಿ, ಆನಂದ್ ಸಿಂಗ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ, ಕೆ.ಎಸ್.ಈಶ್ವರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಶಾಸಕರು ಈಗಾಗಲೇ ಚೇತರಿಸಿಕೊಂಡಿದ್ದಾರೆ.

    ಕಾರು ತಡೆದ ಪೊಲೀಸರಿಗೆ ಸಿಕ್ಕಿದ್ದು ರಾಶಿ ರಾಶಿ ಹಣ: ಒಟ್ಟು ಮೊತ್ತ ಕೇಳಿದ್ರೆ ಶಾಕ್​ ಆಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts