23.2 C
Bangalore
Saturday, December 14, 2019

ಕೆಎಫ್‌ಡಿ ವೈರಸ್ ನಿಯಂತ್ರಣಕ್ಕೆ ಸಿದ್ಧತೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ವಿಜಯವಾಣಿ ಸುದ್ದಿಜಾಲ ಉಡುಪಿ
ಮಳೆಗಾಲ ಮುಗಿದ ಮೇಲೆ ಮಂಗನ ಕಾಯಿಲೆ ಮತ್ತೆ ಹರಡುವ ಸಾಧ್ಯತೆ ಇದೆ. ನವೆಂಬರ್ ತಿಂಗಳಿಂದ ಆರಂಭವಾಗುವ ಈ ರೋಗ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಂಕು ಪತ್ತೆಯಾದ 11 ಪ್ರದೇಶಗಳ 43 ಸಾವಿರ ಮಂದಿಗೆ ಚುಚ್ಚುಮದ್ದು ನೀಡುವ ಕಾರ್ಯಕ್ರಮ ನಡೆಸಲಾಗುತ್ತಿದೆ. 2019ರ ಜನವರಿ 9ರಂದು ಪತ್ತೆಯಾದ ಸತ್ತ ಮಂಗದಲ್ಲಿ ಕೆಎಫ್‌ಡಿ ವೈರಸ್ ಪತ್ತೆಯಾಗಿತ್ತು. ಸಿದ್ದಾಪುರ, ಹೊಸಂಗಡಿ, ಬೆಳ್ವೆ, ಆರ್ಡಿ, ಬಸ್ರೂರು, ಹೇರೂರು, ಕುಕ್ಕುಂದೂರು, ಕಂಡ್ಲೂರು, ಹಿರ್ಗಾನ, ಕೊಲ್ಲೂರಿನ ಗೊಳಿಹೊಳೆ ಪ್ರದೇಶಗಳಲ್ಲಿ ಮೃತಪಟ್ಟಿದ್ದ 14 ಮಂಗಗಳಲ್ಲಿ ಕೆಎಫ್‌ಡಿ ವೈರಸ್ ಪತ್ತೆಯಾಗಿತ್ತು.

ಈ ವರ್ಷ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿ, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಇಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಬಗ್ಗೆ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ 15-20 ದಿನಗಳಿಂದ ಕೆಎಫ್‌ಡಿ ಸೋಂಕಿರುವ 14 ಮಂಗಗಳು ಪತ್ತೆಯಾಗಿರುವ 9 ಪ್ರದೇಶಗಳಲ್ಲಿ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಸೋಂಕು ತಗುಲದಂತೆ ಚುಚ್ಚುಮದ್ದು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲ್ಯಾಬ್‌ನಿಂದ ಚುಚ್ಚುಮದ್ದು: ಚುಚ್ಚುಮದ್ದನ್ನು ಶಿವಮೊಗ್ಗದ ವೈರಸ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಯಿಂದ ತರಿಸಲಾಗುತ್ತಿದೆ. ಇವುಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರವಾನಿಸಲಾಗುತ್ತದೆ. ಮೊದಲ ಹಂತದಲ್ಲಿ ಬಂದ ಚುಚ್ಚುಮದ್ದುಗಳನ್ನು ನೀಡಲಾಗಿದ್ದು, ಹಂತ ಹಂತವಾಗಿ ಬರುವ ಚುಚ್ಚುಮದ್ದುಗಳನ್ನು ನೀಡಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಹೀಗೆ 11 ಪ್ರದೇಶಗಳ 43 ಸಾವಿರ ಮಂದಿಗೆ ಅಕ್ಟೋಬರ್-ನವೆಂಬರ್ ತಿಂಗಳ ಒಳಗೆ ಚುಚ್ಚುಮದ್ದುಗಳನ್ನು ನೀಡುವ ಗುರಿ ಇದೆ.

ಉಡುಪಿ ಜಿಲ್ಲೆಯಲ್ಲಿ ಮುಂದಿನ ಅವಧಿಯಲ್ಲಿ ಕೆಎಫ್‌ಡಿ ವೈರಸ್(ಮಂಗನ ಕಾಯಿಲೆ) ಹರಡದಂತೆ ಎಲ್ಲ ಕ್ರಮಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಚುಚ್ಚುಮದ್ದು ನೀಡುವ ಕಾರ್ಯ ನಿರಂತರ ನಡೆಯುತ್ತಿದೆ. ಇಲಾಖಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.
– ಡಾ.ಓಂಪ್ರಕಾಶ್ ಕಟ್ಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...