ಮದ್ದೂರು: ಅಹಿಂದ ಸಂರಕ್ಷಣಾ ವೇದಿಕೆ ತಾಲೂಕು ಘಟಕ ವತಿಯಿಂದ ಅ.27ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಆತಗೂರು ನಿಂಗಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಎಲ್ಲ ವರ್ಗಕ್ಕೂ ಅನುಕೂಲ ಕಲ್ಪಿಸಿದ್ದಾರೆ. ಇಂಥ ಮಹಾನ್ ವ್ಯಕ್ತಿಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.
ವೇದಿಕೆ ಗೌರವ ಅಧ್ಯಕ್ಷ ಮರಿ ಹೆಗ್ಗಡೆ, ಉಪಾಧ್ಯಕ್ಷ ಇಂತಿಯಾಜ್ ಉಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಶೆಟ್ರು, ಖಜಾಂಚಿ ಮುಟ್ಟನಹಳ್ಳಿ ರಮೇಶ್, ಸಂಘಟನಾ ಕಾರ್ಯದರ್ಶಿ ಪಿ.ಶಶಿಕುಮಾರ್, ಪದಾಧಿಕಾರಿಗಳಾದ ಮಹದೇವಪ್ಪ, ಕೆ.ಟಿ.ಶಿವಕುಮಾರ್, ಜಯರಾಮು, ದಾಕ್ಷಾಯಣಿ ,ಮಮತಾ, ಮಲ್ಲರಾಜು ಚೆನ್ನನಂಜಚಾರಿ, ಗೋವಿಂದಯ್ಯ ಇದ್ದರು.