ಮಹಾಮಸ್ತಕಾಭಿಷೇಕ ಯಶಸ್ಸಿಗೆ ಸಿದ್ಧತೆ

ಧರ್ಮಸ್ಥಳ:  ಮಹಾಮಸ್ತಕಾಭಿಷೇಕ ದೇವರು ಕೊಟ್ಟ ಭಾಗ್ಯ. ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಕಾರ‌್ಯಕ್ರಮ ಯಶಸ್ವಿಗೊಳಿಸುವ ಜವಾಬ್ದಾರಿಯಿದ್ದು, ಲೋಕೋಪಯೋಗಿ ಇಲಾಖೆಯಿಂದ 23 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಹೆಚ್ಚುವರಿಯಾಗಿ ಪ್ರವಾಸೋದ್ಯಮ ಇಲಾಖೆಯಿಂದ ಧರ್ಮಸ್ಥಳ ಸುಂದರೀಕರಣಕ್ಕಾಗಿ 2 ಕೋಟಿ ರೂ. ಅನುದಾನ ಮಂಜೂರಾತಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದರು.

ಧರ್ಮಸ್ಥಳದಲ್ಲಿ ಮಸ್ತಕಾಭಿಷೇಕ ಪೂರ್ವಭಾವಿಯಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗಣ್ಯರ ಭದ್ರತೆ, ಭಕ್ತರ ಅನುಕೂಲಕ್ಕೆ, ಸಂಚಾರ ಸುಗಮ ವ್ಯವಸ್ಥೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದ್ದು 300 ಹೋಂ ಗಾರ್ಡ್‌ಗಳನ್ನು ಹೆಚ್ಚುವರಿಯಾಗಿ ನೇಮಿಸಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದ್ದು ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಮಾಡಲಿದೆ ಎಂದರು. ಗೋಷ್ಠಿಯಲ್ಲಿ ಜಿ.ಪಂ.ಸದಸ್ಯ ಶಾಹುಲ್ ಹಮೀದ್, ಉಳ್ಳಾಲ ನಗರಸಭಾ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಹಮ್ಮದ್ ಮುಕ್ಕಚ್ಚೇರಿ ಉಪಸ್ಥಿತರಿದ್ದರು.