More

    ಫಲಾನುಭವಿಗಳ ಸಮಾವೇಶಕ್ಕೆ ಸಿದ್ಧತೆ

    ತುಮಕೂರು: ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಮಾ.5ರಂದು ಹಮ್ಮಿಕೊಂಡಿರುವ ಫಲಾನುಭವಿಗಳ ಸಮ್ಮೇಳನದ ಯಶಸ್ಸಿಗೆ ಜಿಲ್ಲಾಡಳಿತ ಟೊಂಕಕಟ್ಟಿದ್ದು ಸರಣಿ ಸಭೆಗಳನ್ನು ನಡೆಸುತ್ತಿದೆ.
    ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸುವ ಸಮ್ಮೇಳನದ ಉಸ್ತುವಾರಿ ವಹಿಸಬೇಕಿರುವ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ನಡೆಸುತ್ತಿದ್ದು, ಸಂಪೂರ್ಣ ಹೊಣೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೆಗಲೇರಿದೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಕಾರ್ಯಕ್ರಮದ ಆಯೋಜನೆಯಲ್ಲಿ ಹಾಗೂ ಶಿಷ್ಟಾಚಾರದ ಪಾಲನೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಏರ್ಪಡಿಸಲು ವಿವಿಧ ಅಧಿಕಾರಿಗಳನ್ನು ನಿಯೋಜಿಸಿ, ಕರ್ತವ್ಯಗಳನ್ನು ಸೂಚಿಸಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

    ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ಯೋಜನೆಗಳ 25000 ಫಲಾನುಭವಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಸೇರಿ 358 ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಲ್ಲೆಯ ಎಲ್ಲ ಗ್ರಾಪಂಗಳಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಮಧ್ಯಾಹ್ನ 12ರೊಳಗೆ ಕರೆತರುವ ನಂತರ ಕರೆದೊಯ್ಯುವ ಜವಾಬ್ದಾರಿಯನ್ನು ಸ್ಥಳೀಯ ಗ್ರಾಪಂ ಪಿಡಿಒ ಹಾಗೂ ಗ್ರಾಮಲೆಕ್ಕಾಧಿಕಾರಿಗೆ ವಹಿಸಲಾಗಿದೆ ಎಂದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts