More

    ಗಣರಾಜ್ಯೋತ್ಸವ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹೇಗಿದೆ ಸಿದ್ಧತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

    ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭವನ್ನು ಜ.26ರಂದು ಬೆಂಗಳೂರಿನ ಮಹಾತ್ಮಾ ಗಾಂಧಿ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಿ, ಎಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ದೇಶ ಭಕ್ತಿಯ ಪ್ರತೀಕವಾಗಿರುವ ಈ ಸಮಾರಂಭಕ್ಕೆ ಯಾವೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂಬುದನ್ನು ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ಮತ್ತು ಬೆಂಗಳೂರು ನಗರ ಪೊಲೀಸ್​ ಆಯುಕ್ತ ದಯಾನಂದ ಅವರು ಇಂದಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಏನೇನು ಸಿದ್ಧತೆ ನಡೆದಿದೆ?
    * ಗಣರಾಜ್ಯೋತ್ಸವ ಅಂಗವಾಗಿ ಸಮಾರಂಭಕ್ಕಾಗಿ ಮೈದಾನವನ್ನು ಸಿದ್ಧಗೊಳಿಸಲಾಗಿರುತ್ತದೆ.
    * ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿರುತ್ತದೆ.
    * ವೇದಿಕೆಗೆ ಅಲಂಕಾರಿಕ ಟ್ರಾಸ್ ಪರಿಕರಗಳನ್ನು ಅಳವಡಿಸಲಾಗುತ್ತದೆ.
    * ಧ್ವಜಾರೋಹಣ ಮಾಡಲು ಧ್ವಜ ಸ್ಥಂಭ ನಿರ್ಮಿಸಲಾಗಿರುತ್ತದೆ.
    * ಬೆಳಿಗ್ಗೆ 8.58 ಗಂಟೆಗೆ ಕರ್ನಾಟಕ ಸರ್ಕಾರದ ಮಾನ್ಯ ರಾಜ್ಯಪಾಲರು ಆಗಮಿಸುತ್ತಾರೆ. ಭಾರತೀಯ ರಕ್ಷಣಾಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಮಾನ್ಯ ರಾಜ್ಯಪಾಲರಿಗೆ ಪರಿಚಯಿಸಲಾಗುತ್ತದೆ.
    * ಮಾನ್ಯ ರಾಜ್ಯಪಾಲರು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಾರೆ.
    * ಧ್ವಜಾರೋಹಣದ ನಂತರ ಮಾನ್ಯ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾರೆ.
    * ಗೌರವ ರಕ್ಷೆ ಸ್ವೀಕರಿಸುವ ತಾಲೀಮನ್ನು ದಿನಾಂಕ 22-01-2024, 23-01-2024 ಮತ್ತು 24-01-2024 ಒಟ್ಟು 3 ದಿನಗಳ ಕಾಲ ಸತತವಾಗಿ ನಡೆಸಲಾಗುತ್ತಿದೆ.
    * ಪಥಸಂಚಲನದಲ್ಲಿ ಪೊಲೀಸ್/ಕೇರಳ ಪೊಲೀಸ್, ಸೈಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಮಂದಿ ಭಾಗವಹಿಸಲಿದ್ದಾರೆ.
    * ಶಾಲಾ ಮಕ್ಕಳ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ.
    * ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮಾನ್ಯ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವಿರುತ್ತದೆ.
    ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿರುತ್ತದೆ.

    Progam 1* ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ, ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿ.ಸಿ. ಕ್ಯಾಮೆರಾ ವ್ಯವಸ್ಥೆ ಹಾಗೂ 02 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ.
    * ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬ್ಯುಲೆನ್ಸ್‌ ಗಳನ್ನು ವೈದ್ಯಕೀಯ, ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿರುತ್ತದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
    * ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ.
    * ಜನ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
    * ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲು ಕ್ರಮ ವಹಿಸಲಾಗಿದೆ.
    * ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ.
    * ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು.

    Progam 2

    * ಜನ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
    * ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲು ಕ್ರಮ ವಹಿಸಲಾಗಿದೆ.
    * ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ.
    * ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು.

    Republic

    ಬಾಲರಾಮನ ಮುಡಿ ಅಲಂಕರಿಸಿರುವ ವಜ್ರಖಚಿತ ಕಿರೀಟದ ಬೆಲೆ ಕೇಳಿದ್ರೆ ನೀವು ಬೆರಗಾಗೋದು ಗ್ಯಾರಂಟಿ!

    ಬಾಲರಾಮ ಪ್ರಾಣ ಪ್ರತಿಷ್ಠೆ ವೇಳೆ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಮ್ಮ ಮುಖ ಮುಚ್ಚಿಕೊಂಡಿದ್ದು ಯಾಕೆ ಗೊತ್ತಾ?

    ಶ್ರೀದೇವಿಯ ಆ ಫೋಟೋ ನೋಡಿ ಗಳಗಳನೆ ಅತ್ತ ಸೆನ್ಸೇಷನಲ್ ಡೈರೆಕ್ಟರ್; ಅಂತದ್ದೇನಿದೆ ಎಂದ್ರು ನೆಟ್ಟಿಗರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts