More

    ಜ.10ರಂದು ಲೋಕಸಭೆ ಚುನಾವಣೆಗೆ ಕೈ ತಯಾರಿ ಸಭೆ: ಗ್ಯಾರಂಟಿ ಪ್ರಚಾರಕ್ಕೆ ಕಾರ್ಯಕ್ರಮ

    ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಕಾಂಗ್ರೆಸ್ ಜನವರಿ 10ರಂದು ಮಹತ್ವದ ಸಭೆ ಕರೆದಿದೆ.
    ಅಂದರು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಎಲ್ಲ ಶಾಸಕರು ಹಾಗೂ ನಾಯಕರಿಗೆ ಚುನಾವಣೆ ತಯಾರಿ ಬಗ್ಗೆ ಸೂಚನೆಗಳನ್ನು ನೀಡಲಿದ್ದಾರೆ.
    ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್, ಬರುವ ಜ.10 ರಂದು ಕೇಂದ್ರ ನಾಯಕರು ಹಾಗೂ ರಾಜ್ಯದ ಎಲ್ಲ ಶಾಸಕರನ್ನು ಒಳಗೊಂಡು ಲೋಕಸಭೆ ಚುನಾವಣೆ ತಯಾರಿಗೆ ಸಭೆ ನಡೆಸಲಾಗುವುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವುದರ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗುವುದು. ಕಾರ್ಯಕರ್ತರು ಮನೆ, ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡುವ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದರು.
    ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ನನ್ನ 40 ವರ್ಷಗಳ ರಾಜಕಾರಣದಲ್ಲಿ ಇಂತಹ ಅವಕಾಶ, ಭಾಗ್ಯ ದೊರಕಿರಲಿಲ್ಲ. ನುಡಿದಂತೆ ನಡೆದಿದ್ದೇವೆ, ಇದನ್ನು ಕಾರ್ಯಕರ್ತರು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಇದೇ ವೇಳೆ ತಿಳಿಸಿದರು.
    ಶೀಘ್ರ ಸ್ಥಾನಮಾನ
    ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಕಾರ್ಯಕರ್ತರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ. ಹೀಗಾಗಿ ಪ್ರತಿಯೊಂದು ವಾಡ್‌ರ್, ಪಂಚಾಯಿತಿಯಲ್ಲಿ ಆಶ್ರಯ ಸಮಿತಿ ಸೇರಿದಂತೆ ಅನೇಕ ಸಮಿತಿಗಳಿದ್ದು, ಇಲ್ಲೆಲ್ಲಾ ಕಾರ್ಯಕರ್ತರಿಗೆ ಶೀಘ್ರ ಸ್ಥಾನಗಳನ್ನು ಕಲ್ಪಿಸಲಾಗುವುದು. ಎರಡು ವರ್ಷಗಳಿಗೆ ಒಮ್ಮೆ ಬದಲಾವಣೆ ಮಾಡಬೇಕು ಎನ್ನುವ ಆಲೋಚನೆ ನಮ್ಮಲ್ಲಿದೆ ಎಂದರು.
    ಯಾವುದೇ ಸಮಿತಿ ರಚನೆ ಮಾಡಿದರೂ ಅದರಲ್ಲಿ ಸೇವಾದಳ, ಮಹಿಳಾ, ಯುವ, ವಿದ್ಯಾರ್ಥಿ ಮತ್ತು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಇರಬೇಕು ಮತ್ತು ಎಲ್ಲರಿಗೂ ಸಮಾನ ರೀತಿಯ ಅವಕಾಶ ದೊರೆಯಬೇಕು ಎನ್ನುವುದು ಪಕ್ಷದ ಆಶಯ. ಕಾರ್ಯಕರ್ತರಿಗೆ ಪಕ್ಷ ಏನು ಕೊಟ್ಟಿದೆ ಎಂದು ಯಾರಾದರೂ ಕೇಳಿದಾಗ, ನಮ್ಮ ಪಕ್ಷ ನಮಗೆ ಉತ್ತಮ ಸ್ಥಾನಮಾನ ನೀಡಿದೆ ಎಂದು ಹೇಳುವಂತಾಗಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts