ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ರಾಜ್ಯೋತ್ಸವವನ್ನು ನ. 1ರಂದು ಅದ್ಧೂರಿಯಾಗಿ ಆಚರಿಸಲಾಗುವುದು. ಸಂಬ0ಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸರ್ಕಾರಿ ನೌಕರರು, ಶಾಲೆ- ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ನ. 1ರಂದು ಬೆಳಗ್ಗೆ 8.55ಕ್ಕೆ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧ್ವಜಾರೋಹಣ ನೇರವೆರಿಸುವರು. ವಿವಿಧ ಶಾಲೆ- ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಜ್ಯೋತ್ಸವ ಕಾರ್ಯಕ್ರಮದದಲ್ಲಿ ಉತ್ತಮ ಪ್ರದರ್ಶನ ನೀಡುವ ದಳಗಳಿಗೆ ಬಹುಮಾನ ನೀಡಲಾಗುವುದು. ಅ. 31ರಿಂದ ನ. 2ರವರೆಗೆ ಎಲ್ಲ ಸರ್ಕಾರಿ ಕಟ್ಟಡಗಳು ಹಾಗೂ ಮುಖ್ಯ ವೃತ್ತಗಳಲ್ಲಿ ದೀಪಾಲಾಂಕಾರ ಮಾಡಬೇಕು ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳು ಭಾಗವಹಿಸಿದ್ದರು.

Share This Article

Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್​ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ

ಕ್ಯಾನ್ಸರ್​​ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…

ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips

ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…