ಮೋದಿಯನ್ನು ಮೂರನೇ ಸಲ ಪ್ರಧಾನಿ ಆಗಿಸಲು ಯುವ ಬ್ರಿಗೇಡ್ ಸಜ್ಜು: ಕಾರ್ಯಕರ್ತರ ಪೂರ್ವಭಾವಿ ಸಭೆ

Sulibele
Published on

ಚಿತ್ರದುರ್ಗ: ನರೇಂದ್ರ ಮೋದಿ ಅವರನ್ನು ಮೂರನೇ ಸಲ ಪ್ರಧಾನಿ ಆಗಿಸುವ ನಿಟ್ಟಿನಲ್ಲಿ ಸಾಮಾಜಿಕ ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ಸಜ್ಜಾಗಿದೆ. ಈ ನಿಟ್ಟಿನಲ್ಲಿ ನಮೋ ಬ್ರಿಗೇಡ್ 2.0ಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ಪೂರ್ವಭಾವಿ ಸಭೆಗಳು ನಡೆಯುತ್ತಿವೆ.

ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಇಲ್ಲಿನ ಮೆದೆಹಳ್ಳಿ ರಸ್ತೆಯ ರೋಟರಿ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಈ ಸಭೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಪಾಲ್ಗೊಂಡರು.

ಮೂರನೇ ಬಾರಿಗೆ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವಂತೆ ಈ ಸಭೆಯಲ್ಲಿ ಸಂಕಲ್ಪ ತೊಡಲಾಯಿತು. ಉತ್ತರ ಭಾರತದಲ್ಲಿ ಪ್ರಧಾನಿ ಆಗಬಹುದಾದವರು ಬಹಳಷ್ಟು ಮಂದಿ ಇದ್ದರೂ ಅವರನ್ನು ನಾಯಕ ಎಂದು ಇಡೀ ದೇಶದ ಎಲ್ಲರಿಗೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಬಹಳಷ್ಟು ವರ್ಷಗಳ ಬಳಿಕ ಇಡೀ ದೇಶದಲ್ಲಿ ಜನರನ್ನು ಒಂದುಗೂಡಿಸಲು ಸಾಧ್ಯವಾಗಿದ್ದು ನರೇಂದ್ರ ಮೋದಿಗೆ ಮಾತ್ರ ಎಂದು ಸೂಲಿಬೆಲೆ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net