More

    ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಿ

    ರಾಯಚೂರು: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಎಸ್‌ಯುಸಿಐನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಜಿಲ್ಲೆಯ ಎಡ ಬಲಕ್ಕೆ ನದಿಗಳಿದ್ದರೂ ಜನರು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ನಗರದಲ್ಲಿ ಕಸ ವಿಲೇವಾರಿ, ಚರಂಡಿ ಸ್ವಚ್ಛತೆ ನಡೆಯುತ್ತಿಲ್ಲ ಎಂದು ದೂರಿದರು.
    ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು. ನಗರದಲ್ಲಿರುವ ದುರಸ್ತಿ ಹಾಗೂ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು. ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು. ಒಪೆಕ್ ಆಸ್ಪತ್ರೆಯನ್ನು ಖಾಸಗಿಯವರಿಗೆ ವಹಿಸಬಾರದು. ಸರ್ಕಾರದಿಂದಲೇ ನಿರ್ವಹಣೆ ಮಾಡಬೇಕು.
    ಎಲ್ಲ ಸರ್ಕಾರಿ ಶಾಲೆ, ಕಾಲೇಜು, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕು. ನಗರದ ಸರ್ಕಾರಿ ಬಾಲಕ, ಬಾಲಕಿಯರ ಪಿಯು ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು.
    ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು. ರಿಮ್ಸ್ ಹಾಗೂ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಅವಶ್ಯಕತೆಗೆ ಅನುಗುಣವಾಗಿ ವೈದ್ಯರು, ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಬೇಕು.
    ರಾಯಚೂರು ವಿವಿಗೆ ಅವಶ್ಯಕ ಅನುದಾನ ನೀಡಬೇಕು. ಮುನಿರಾಬಾದ್-ಮಹೆಬೂಬ್‌ನಗರ ರೈಲು ಮಾರ್ಗ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳೀಸಬೇಕು. ರಾಯಚೂರಿನಿಂದ ಬೆಂಗಳೂರಿನ ಾಸ್ಟ್ ಪ್ಯಾಸಂಜರ್ ರೈಲು ಓಡಾಟ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಸಮಿತಿ ಸದಸ್ಯ ಎಚ್.ವಿ.ದಿವಾಕರ್, ಜಿಲ್ಲಾ ಕಾರ್ಯದರ್ಶಿ ಡಾ.ಚಂದ್ರಗಿರೀಶ್, ಪದಾಕಾರಿಗಳಾದ ಎನ್.ಎಸ್.ವೀರೇಶ, ಚನ್ನಬಸವ ಜಾನೇಕಲ್, ಮಹೇಶ ಚೀಕಲಪರ್ವಿ, ಅಣ್ಣಪ್ಪ ಶಿರಶ್ಯಾಡ, ಜಮಾಲುದ್ದೀನ್, ಮಲ್ಲನಗೌಡ, ವಿನೋದ, ಪ್ರಮೋದ, ಪೀರಸಾಬ್, ಹೇಮಂತ್, ಅಮೋಘ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts