More

    ಬರ ನಿವಾರಣೆಗೆ ಸನ್ನದ್ಧರಾಗಿ

    ಇಂಡಿ: ಕುಡಿಯುವ ನೀರಿನ ತೊಂದರೆಯಾಗದಂತೆ ಮತ್ತು ಬರಗಾಲ ಎದುರಿಸಲು ತಾಲೂಕುಮಟ್ಟದ ಅಧಿಕಾರಿಗಳು ಸನ್ನದ್ಧರಾಗಬೇಕು. ತಾಲೂಕಿನ ಯಾವುದೇ ಗ್ರಾಮದ ಜನವಸತಿ ಪ್ರದೇಶಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮವಹಿಸಬೇಕು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

    ಪಟ್ಟಣದ ತಾಲೂಕಾಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ನೀರಿನ ಮೂಲ ಇದ್ದರೆ ಅದನ್ನು ತಮ್ಮ ವಶಕ್ಕೆ ಪಡೆದುಕೊಂಡು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಬೇಕು. ನೀರಿನ ಮೂಲ ಇಲ್ಲದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು. ಯಾವುದೇ ಗ್ರಾಮ, ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಪಿಡಿಒಗಳು, ತಾಲೂಕಾ ನೋಡಲ್ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

    ತಾಲೂಕಿನಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಿದೆ. ಮಳೆಯ ಕೊರತೆಯ ಕಾರಣ ತಾಲೂಕಿನಲ್ಲಿ ಬರ ಆವರಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ ತಾಲೂಕಿನಲ್ಲಿರುವ ಬಹುತೇಕ ಕೆರೆಗಳನ್ನು ಕಾಲುವೆಯ ಮೂಲಕ ನೀರು ಹಾಯಿಸಿ ತುಂಬಿಸಲಾಗಿದೆ. ಸದ್ಯದ ಸ್ಥಿತಿಯಲ್ಲಿ ಜನ ಮತ್ತು ಜಾನುವಾರುಗಳಿಗೆ ಯಾವುದೇ ತೊಂದರೆಗಳಿಲ್ಲ. ಮುಂಬರುವ ದಿನಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಯಾವುದೇ ತೊಂದರೆಯಾಗಬಾರದು ಎಂದರು.

    ತಾಲೂಕಿನಾದ್ಯಂತ 147 ಕಾಯ್ದೆ ಜಾರಿಗೆ ಮಾಡಲಾಗಿದ್ದು, ಕೆರೆಗಳ ಹತ್ತಿರವಿರುವ ತೆರೆದಬಾವಿ ಮತ್ತು ಕೊಳವೆಬಾವಿಗಳನ್ನು ರೈತರು ಕೃಷಿ ಚಟುವಟಿಕೆ ಬಳಸುವಂತಿಲ್ಲ. ಅಂತಹ ರೈತರ ಗಮನಕ್ಕೆ ಬಾರದೇ ಇದ್ದರೆ ಕೂಡಲೇ ನಮ್ಮ ಗಮನಕ್ಕೆ ತರಬೇಕೆಂದು ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.

    ತಹಸೀಲ್ದಾರ್ ಬಿ.ಎಸ್. ಕಡಕಬಾವಿ, ಇಒ ಬಾಬು ರಾಠೋಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಎಸ್.ಆರ್. ರುದ್ರವಾಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹದೇವಪ್ಪ ಏವೂರ, ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಎಚ್.ಎಸ್. ಪಾಟೀಲ, ಹೆಸ್ಕಾಂ ಎಇಇ ಎಸ್.ಆರ್. ಮೆಡೇಗಾರ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts