More

    ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

    ಶಿಗ್ಗಾಂವಿ: ತಾಲೂಕಾಡಳಿತದಿಂದ ಜ. 26ರಂದು ಗಣರಾಜ್ಯೋತ್ಸವ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಹಸೀಲ್ದಾರ್ ಸಂತೋಷ ಹಿರೇಮಠ ಸೂಚನೆ ನೀಡಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ಹೈಸ್ಕೂಲಿನ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು. ನಿವೃತ್ತಿ ಹೊಂದುತ್ತಿರುವ ಪೌರ ಕಾರ್ವಿುಕರಿಗೆ ಮತ್ತು ಸೇನೆಯಲ್ಲಿ ಸೇವೆ ಸಲ್ಲಿಸಿ ಪ್ರಸಕ್ತ ವರ್ಷದಲ್ಲಿ ನಿವೃತ್ತಿ ಹೊಂದಿರುವಂತಹ ಸೈನಿಕರಿಗೆ ಹಾಗೂ ಕೃಷಿಯಲ್ಲಿ ಸಾಧನೆ ಮಾಡಿದ ಮತ್ತು ಕೃಷಿ ಪ್ರಶಸ್ತಿ ಪಡೆದ ರೈತರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತಾಲೂಕಿನ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದರು.

    ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿ ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ತಾಪಂ ಇಒ ಪಾಲಯ್ಯನಕೋಟೆ ಶ್ರೀನಿವಾಸ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ರೈತ ಸಂಘಟನೆಗಳ ಮುಖಂಡರಾದ ಬಸಲಿಂಗಪ್ಪ ನರಗುಂದ, ಶಂಕರಗೌಡ ಪಾಟೀಲ, ಮುತ್ತು ಗುಡಗೇರಿ, ಆನಂದ ಕೆಳಗಿನಮನಿ, ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಇದ್ದರು.

    ಪ್ರತಿಭಟನೆ ಎಚ್ಚರಿಕೆ

    ತಾಲೂಕು ಆಡಳಿತದ ವತಿಯಿಂದ ನೆರವೇರಲಿರುವ ಕಾರ್ಯಕ್ರಮಗಳ ಪೂರ್ವಭಾವಿ ಸಭೆಗೆ ತಾಲೂಕಿನ ಹಲವು ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗುವುದಿಲ್ಲ. ಕಾರ್ಯಕ್ರಮಗಳಿಗೆ ಇಲಾಖಾವಾರು ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಾರೆ. ಅಧಿಕಾರಿಗಳು ತಮ್ಮ ಬೇಜವಾಬ್ದಾರಿ ತಿದ್ದಿಕೊಂಡು ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸದಿದ್ದರೆ ಅಂತಹ ಇಲಾಖೆಗಳ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ಸದಸ್ಯ ಬಸಲಿಂಗಪ್ಪ ನರಗುಂದ ಅಧಿಕಾರಿಗಳಿಗೆ ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts