More

    ಅರ್ಥಪೂರ್ಣ, ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ

    ಸವಣೂರ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅರ್ಥಪೂರ್ಣ, ಅದ್ದೂರಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲು ಸಿದ್ಧತೆ ನಡೆದಿದೆ ಎಂದು ಉಪವಿಭಾಗಾಧಿಕಾರಿ ಮೊಹಮ್ಮದ್ ಖಿಜರ್ ಹೇಳಿದರು.

    ಪಟ್ಟಣದ ಉಪ ವಿಭಾಗಾಧಿಕಾರಿ ಕಾರ್ಯಾಲಯದ ಸಭಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸೋಮವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸ್ಥಳೀಯ ಸಂಘ-ಸಂಸ್ಥೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ವ ಇಲಾಖೆಗಳ ಸಹಕಾರ ಹಾಗೂ ಮಾರ್ಗದರ್ಶನದೊಂದಿಗೆ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಗುವುದು. 100 ಮೀಟರ್ ಉದ್ದದ ರಾಷ್ಟ್ರಧ್ವಜ ಮೆರವಣಿಗೆ, ಸಾಧಕರಿಗೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಖಜಕಿಸ್ತಾನ್ ರಾಷ್ಟ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಸೈಕ್ಲಿಂಗ್, ಈಜು ಹಾಗೂ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಐರನ್ ಮ್ಯಾನ್ ಪ್ರಶಸ್ತಿಗೆ ಭಾಜನರಾಗಿರುವ ತಾಲೂಕಿನ ಇಚ್ಚಂಗಿ ಗ್ರಾಮದ, ಹುಬ್ಬಳ್ಳಿ ತಾಪಂ ಎಡಿ ಸದಾನಂದ ಅಮರಾಪೂರ ಅವರಿಗೆ ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ ಸೇರಿದಂತೆ ವಿವಿಧ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

    ತಹಸೀಲ್ದಾರ್ ಗಣೇಶ ಸವಣೂರ, ಶಿರಸ್ತೇದಾರ ತ್ರಿವೇಣಿ ನೀರಲಕಟ್ಟಿ, ಪಿಎಸ್‌ಐ ಮೇಘರಾಜ ದೊಡ್ಡಮನಿ, ಸಹಾಯಕ ಕೃಷಿ ನಿರ್ದೇಶಕಿ ಸವಿತಾ ಚಕ್ರಸಾಲಿ, ಬಿಇಒ ಎಂ.ಎಫ್. ಬಾರ್ಕಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ದೊಡ್ಡಣ್ಣನವರ, ಕರವೇ ತಾಲೂಕು ಘಟಕದ ಅಧ್ಯಕ್ಷ ಪರಶುರಾಮ ಈಳಗೇರ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಸಿ.ಎನ್.ಪಾಟೀಲ, ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts